RSS ನೈಜ ಇತಿಹಾಸ ಬರೆದಿದ್ದಕ್ಕೆ ಹಳೆಯ ಕೇಸ್‌ ರೀ-ಓಪನ್: ಲೇಖಕ ಹಾರೋಹಳ್ಳಿ ರವೀಂದ್ರ

Date:

ಲೇಖಕ ಹಾಗೂ ಸಾಮಾಜಿಕ ಹೋರಾಟಗಾರ ಹಾರೋಹಳ್ಳಿ ರವೀಂದ್ರ 2014ರಲ್ಲಿ ಬರೆದ ‘ಹಿಂದುತ್ವದೊಳಗೆ ಭಯೋತ್ಪಾದನೆ’ ಕೃತಿಯ ಮೇಲಿದ್ದ ಹಳೆಯ ಪ್ರಕರಣವನ್ನು ಮತ್ತೆ ಮರುಪರಿಶೀಲನೆ (ರೀ-ಓಪನ್)ಗೆ ಮಾಡಲಾಗಿದೆ. ಈ ಸಂಬಂಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಲೇಖನ ಹಾರೋಹಳ್ಳಿ ರವೀಂದ್ರ ಅವರು ಈ ಕಾನೂನು ಹೋರಾಟವನ್ನು ಸಮರ್ಥವಾಗಿ ಎದುರಿಸುವುದಾಗಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಫೇಸ್‌ಬುಕ್ ಪೋಸ್ಟ್‌ನಲ್ಲಿ, “2014ರಲ್ಲಿ ನಾನು ‘ಹಿಂದುತ್ವದೊಳಗೆ ಭಯೋತ್ಪಾದನೆ’ ಎಂಬ ಪುಸ್ತಕವನ್ನು ಬರೆದಿದ್ದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮಾಡಿರುವ ಕೃತ್ಯಗಳ ನೈಜ ಇತಿಹಾಸವನ್ನು ಅದರಲ್ಲಿ ವಿವರಿಸಲಾಗಿತ್ತು. ಆ ಸಂದರ್ಭದಲ್ಲಿ ಈ ಕೃತಿಯ ವಿರುದ್ಧ ನನ್ನ ಮೇಲೆ ಪ್ರಕರಣ ದಾಖಲಿಸಲಾಗಿತ್ತು” ಎಂದು ನೆನಪಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

“ಆ ದಿನಗಳಲ್ಲಿ ಸುದೀರ್ಘವಾಗಿ ನ್ಯಾಯಾಲಯಕ್ಕೆ ಅಲೆದು, ಕಾನೂನು ಹೋರಾಟ ನಡೆಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿತ್ತು. ಆದರೆ, ಈಗ ಮತ್ತೆ ಅದೇ ಹಳೆಯ ಪ್ರಕರಣವನ್ನು ಮರುಪ್ರಾರಂಭಿಸಲಾಗಿದೆ. ಇದನ್ನು ಎದುರಿಸಲು ನಾನು ಸಂಪೂರ್ಣವಾಗಿ ಸಿದ್ಧನಿದ್ದೇನೆ. ಏಕೆಂದರೆ ನಾನು ಯಾವುದೇ ತಪ್ಪು ಮಾಡಿಲ್ಲ,” ಎಂದು ರವೀಂದ್ರ ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕೃತಿ ಮತ್ತು ಅದರ ವಿಚಾರಗಳಿಗೆ ಸಂಬಂಧಿಸಿದಂತೆ ಈ ಹಿಂದೆಯೂ ರಾಜ್ಯಾದ್ಯಂತ ಪರ-ವಿರೋಧ ಚರ್ಚೆಗಳು ನಡೆದಿದ್ದವು. ಇದೀಗ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದ್ದು, ರವೀಂದ್ರ ಅವರ ಈ ದಿಟ್ಟ ಹೇಳಿಕೆ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...