ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ

Date:

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮರು ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹೈಕೋರ್ಟ್ ಆದೇಶ ಹಾಗೂ ಆಯೋಗದಲ್ಲಿ ಕೇಳಿಬಂದಿರುವ ಇತ್ತೀಚಿನ ಭ್ರಷ್ಟಾಚಾರದ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

- Advertisement -

ತಮ್ಮ ಪುತ್ರಿಗೆ ಕೇವಲ 40 ಸಾವಿರ ರೂ. ನಕಲಿ ಆದಾಯ ಪ್ರಮಾಣಪತ್ರ ಸೃಷ್ಟಿಸಿ ಅಕ್ರಮವಾಗಿ ಮೀಸಲಾತಿಯಡಿ ಹುದ್ದೆ ಕೊಡಿಸಿದ ಆರೋಪದ ಹಿನ್ನೆಲೆಯಲ್ಲಿ ಈ ಹಿಂದೆ ಜುಲೈ 13ರಂದು ಸಾಹುಕಾರ್ ಅವರನ್ನು ರಾಜ್ಯಪಾಲರು ಅಮಾನತು ಮಾಡಿದ್ದರು. ಇದನ್ನು ಪ್ರಶ್ನಿಸಿ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ‘ಸಚಿವ ಸಂಪುಟದ ಕಡ್ಡಾಯ ಶಿಫಾರಸು ಇಲ್ಲದೆ ರಾಜ್ಯಪಾಲರು ಏಕಾಏಕಿ ಅಮಾನತು ಆದೇಶ ಹೊರಡಿಸಿರುವುದು ಕಾನೂನುಬಾಹಿರ’ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ಅಮಾನತು ಆದೇಶವನ್ನು ರದ್ದುಗೊಳಿಸಿ 7 ದಿನದೊಳಗೆ ಅವರನ್ನು ಮತ್ತೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವಂತೆ ಷರತ್ತುಬದ್ಧ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಕೆಪಿಎಸ್‌ಸಿಯಂತಹ ಸಾಂವಿಧಾನಿಕ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡಲು ಹಾಗೂ ಭ್ರಷ್ಟಾಚಾರದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಹುಕಾರ್ ಅವರನ್ನು ಹುದ್ದೆಯಿಂದ ದೂರವಿಡುವುದು ಅನಿವಾರ್ಯ ಎಂದು ಸರ್ಕಾರ ತೀರ್ಮಾನಿಸಿದೆ.

ಸಂಪುಟದ ಈ ನಿರ್ಣಯದಿಂದಾಗಿ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಮತ್ತೆ ತೀವ್ರ ಸಂಕಷ್ಟ ಎದುರಾದಂತಾಗಿದೆ. ರಾಜ್ಯ ಸರ್ಕಾರವೇ ಅಧಿಕೃತವಾಗಿ ಅಮಾನತಿಗೆ ಒಪ್ಪಿಗೆ ಸೂಚಿಸಿರುವುದರಿಂದ, ರಾಜ್ಯಪಾಲರು ನಿಯಮಾನುಸಾರ ಅಮಾನತು ಆದೇಶವನ್ನು ಮರುಹೊರಡಿಸುವುದು ಬಹುತೇಕ ನಿಶ್ಚಿತವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...

ಮೈಶುಗರ್‌ ಖಾಸಗೀಕರಣ ಕುರಿತು ನಿರಾಣಿ ಹೇಳಿಕೆಗೆ ರೈತ ಹಿತರಕ್ಷಣಾ ಸಮಿತಿ ಖಂಡನೆ

ಮೈಸೂರು ಸಕ್ಕರೆ ಕಾರ್ಖಾನೆ (ಮೈಷುಗರ್) ಅನ್ನು ಜಾಗತಿಕ ಟೆಂಡರ್ ಕರೆದು ಖಾಸಗಿ...

ವಿಜಯಪುರ |ಶಿಥಿಲ ಶಾಲಾ ಕಟ್ಟಡ ತೆರವಿಗೆ ಉಪ ಲೋಕಾಯುಕ್ತರ ಸೂಚನೆ

ನಗರದ ನಂ.24ರ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಸಕರ ಮಾದರಿ ಪ್ರಾಥಮಿಕ...