15,000 ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ: ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

Date:

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (GPSTR – 6ರಿಂದ 8ನೇ ತರಗತಿ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಪ್ರಕಟಿಸಲಾಗಿದೆ. ಮುಂಬರುವ 2027ರ ಜನವರಿ 18ರಿಂದ ರಾಜ್ಯಾದ್ಯಂತ ಪರೀಕ್ಷೆಗಳು ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ಜನವರಿ 18ರಿಂದ ಪರೀಕ್ಷೆಗಳು ನಡೆಯಲಿದ್ದು, ವಿಷಯವಾರು ಮತ್ತು ಪತ್ರಿಕೆವಾರು ವಿವರವಾದ ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ schooleducation.karnataka.gov.in ನಲ್ಲಿ ಸೇರ್ಪಡೆ ಅಧಿಸೂಚನೆಯ ಮೂಲಕ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

ಇದನ್ನೂ ಓದಿ: ಸರ್ಕಾರಿ ಶಾಲೆಗೆ ಮಕ್ಕಳಿಲ್ಲ: ದೇಶಾದ್ಯಂತ 86 ಲಕ್ಷ ದಾಖಲಾತಿ ಇಳಿಕೆ, ರಾಜ್ಯದಲ್ಲೂ ಖಾಸಗಿ ಶಾಲೆಗಳತ್ತ ಒಲವು

ಈ ಬಾರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳಿಗೆ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ಆಯ್ಕೆ ಪಟ್ಟಿ ಸಿದ್ಧಪಡಿಸುವಾಗ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಅಂಕಗಳನ್ನು ಶೇ. 85ರಷ್ಟು ಪರಿಗಣಿಸಲಾಗುತ್ತದೆ. ಇನ್ನುಳಿದ ಶೇ. 15ರಷ್ಟು ಅಂಕಗಳನ್ನು ನಾಲ್ಕು ವರ್ಷಗಳ ಸಂಯೋಜಿತ ಶಿಕ್ಷಕರ ಶಿಕ್ಷಣ ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಪರಿಗಣಿಸಲಾಗುತ್ತದೆ. ಈ ಸಂಬಂಧ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಈಗಾಗಲೇ ರಾಜ್ಯಪತ್ರ (Gazette) ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಪ್ರಚಲಿತ ಶಾಲಾ ಶಿಕ್ಷಣ ಇಲಾಖೆಯ ನೇಮಕಾತಿ ಮಾರ್ಗಸೂಚಿಗಳ ಪ್ರಕಾರ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ ಪರೀಕ್ಷೆಯು ಸಾಮಾನ್ಯವಾಗಿ ಮೂರು ಪತ್ರಿಕೆಗಳನ್ನು ಒಳಗೊಂಡಿರುತ್ತದೆ (ಪತ್ರಿಕೆ-1: ಸಾಮಾನ್ಯ ಜ್ಞಾನ ಮತ್ತು ಬೋಧನಾ ಸಾಮರ್ಥ್ಯ, ಪತ್ರಿಕೆ-2: ಸಂಬಂಧಿತ ವಿಷಯದ ಜ್ಞಾನ, ಪತ್ರಿಕೆ-3: ಭಾಷಾ ಸಾಮರ್ಥ್ಯ). ಇದರಲ್ಲಿ ಪತ್ರಿಕೆ-1 ಮತ್ತು ಪತ್ರಿಕೆ-2ರ ಅಂಕಗಳನ್ನು ಮೆರಿಟ್ ಪಟ್ಟಿಗೆ ಪರಿಗಣಿಸಲಾಗುತ್ತದೆ.

ನೇಮಕಾತಿ ಮತ್ತು ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. “ಅಭ್ಯರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಮಧ್ಯವರ್ತಿಗಳು ಅಥವಾ ವಂಚಕರ ಆಮಿಷಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಪರೀಕ್ಷೆಯತ್ತ ಹೆಚ್ಚಿನ ಗಮನಹರಿಸಬೇಕು” ಎಂದು ಇಲಾಖೆ ಮನವಿ ಮಾಡಿದೆ.

ನೇಮಕಾತಿ ಅಥವಾ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಅಥವಾ ಮಾರ್ಗದರ್ಶನ ಅಗತ್ಯವಿದ್ದಲ್ಲಿ ಅಭ್ಯರ್ಥಿಗಳು ಕೇಂದ್ರೀಕೃತ ದಾಖಲಾತಿ ಘಟಕದ (CAC) ಸಹಾಯವಾಣಿ ಸಂಖ್ಯೆಗಳಾದ 080-22483145, 080-22483140 ಅಥವಾ ಮೊಬೈಲ್ ಸಂಖ್ಯೆ 9449588020 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಕೇಂದ್ರೀಕೃತ ದಾಖಲಾತಿ ಘಟಕ (CAC) ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಮಂಡ್ಯ ತಾಲೂಕು ಹೊಳಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ...

ಅಕ್ರಮ ಮಾದಕವಸ್ತು ಸಾಗಣೆ ಜಾಲ ಭೇದಿಸಿದ NCB; ನಾಲ್ವರ ಬಂಧನ!

ರಾಷ್ಟ್ರ ರಾಜಧಾನಿ ದೆಹಲಿಯಿಂದ ಕಾಶ್ಮೀರ ಕಣಿವೆಗೆ ಅಕ್ರಮವಾಗಿ ಔಷಧೀಯ ಮಾದಕವಸ್ತುಗಳನ್ನು ಪೂರೈಸುತ್ತಿದ್ದ...

ವಿಜಯಪುರ |ಬೆಳಕಿನ ಹಬ್ಬದ ಸಂಭ್ರಮದೊಂದಿಗೆ ಸಂವಿಧಾನದ ಮೌಲ್ಯಗಳ ಜಾಗೃತಿ

ಬೆಳಕಿನ ಹಬ್ಬದ ಸಂಭ್ರಮದ ನಡುವೆಯೇ ಸಂವಿಧಾನದ ಆಶಯ, ಸಮಾನತೆ, ಸ್ವಾತಂತ್ರ್ಯ ಹಾಗೂ...