ಮೂರು ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ನೊಳಗೆ ಪೂರ್ಣ: ಕೆ ಜೆ ಜಾರ್ಜ್‌

Date:

ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದರು.

- Advertisement -

ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ” ಎಂದು ಸ್ಪಷ್ಟಪಡಿಸಿದರು.

“ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...