ಎರಡು ವರ್ಷಗಳ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ವೇತನ ನಿಗದಿ ಮಾಡಿ ಸರ್ಕಾರ ಆದೇಶ

Date:

Advertisements

ಸರಕಾರಿ ಪ್ರಥಮ ದರ್ಜೆಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 1001 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ಶಿಕ್ಷಕರ ದಿನಾಚರಣೆಯ ದಿನವಾದ ಇಂದು (ಗುರುವಾರ, ಸೆ.5) ಹೊರಡಿಸಿದೆ.

2021ರಲ್ಲಿ ನೇಮಕಾತಿಯು ಕೆಇಎ ಮೂಲಕ ಅಧಿಸೂಚನೆಯಾಗಿದ್ದು, ಅಂತಿಮ ಆಯ್ಕೆ ಪಟ್ಟಿಯನ್ನು 2023ರ ನವೆಂಬರ್ 4ರಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟವಾಗಿದ್ದರೂ ಕೂಡ ಇದುವರೆಗೂ ಸ್ಥಳನಿಯುಕ್ತಿ ಆದೇಶ ಪತ್ರ ನೀಡಿರಲಿಲ್ಲ.

ಕಳೆದ ಜೂನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಪ್ರತಿಯ ವಿಳಂಬದಿಂದಾಗಿ ಕಂಗಾಲಾಗಿದ್ದ ಅಭ್ಯರ್ಥಿಗಳು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆಯ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ್ದರು.

Advertisements

ಎರಡು ವರ್ಷಗಳ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳ ವೇತನ ಶ್ರೇಣಿ ರೂ.57,700- 1,82,400 (ಯುಜಿಸಿ ವೇತನ ಶ್ರೇಣಿ) ನಿಗದಿ ಮಾಡಿ ಸರ್ಕಾರ ಆದೇಶಿಸಿದೆ.

ಅಧಿಸೂಚನೆಯ ಪ್ರತಿಯನ್ನು ಅಭ್ಯರ್ಥಿಗಳ ಖಾಯಂ ವಿಳಾಸಕ್ಕೆ ಪ್ರತ್ಯೇಕವಾಗಿ ಅಂಚೆಯ ಮೂಲಕ ರವಾನಿಸಲು ಕಾಲೇಜು ಶಿಕ್ಷಣ ಇಲಾಖೆ ಕ್ರಮವಹಿಸಲಿದೆ. ಸದರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಈ ಆದೇಶ ತಲುಪಿದ 15 (ಹದಿನೈದು ದಿನಗಳೊಳಗೆ) ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇವರಲ್ಲಿ ವರದಿ ಮಾಡಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯವರು ನಿಯಮಾನುಸಾರ ಜೇಷ್ಠತೆಯ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿ ಆದೇಶವನ್ನು ನೀಡಲದ್ದಾರೆ. ಅಭ್ಯರ್ಥಿಗಳು ಸ್ಥಳ ನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ದಿನಾಂಕದಿಂದ ವೇತನ ಹಾಗೂ ಇತರ ಭತ್ಯೆಗಳನ್ನು ಪಡೆಯಲು ಅರ್ಹರಿರುತ್ತಾರೆ.

ಸರ್ಕಾರದ ಪೂರ್ವಾನುಮತಿ ಪಡೆಯದೆ ನಿಗಧಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫಲರಾಗುವ ಅಭ್ಯರ್ಥಿಯ ನೇಮಕಾತಿ ಆದೇಶ ತಾನಾಗಿಯೇ ಅನೂರ್ಜಿತವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X