ಮೂರು ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಭರ್ತಿ ಪ್ರಕ್ರಿಯೆ ಪೂರ್ಣ: ಪರಮೇಶ್ವರ್

Date:

ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‍ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

- Advertisement -

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಮೂಡಬಿದ್ರೆ, ಮುಲ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಒದಗಿಸಿಕೊಡುವ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತರ ನೀಡಿ, “ಕಳೆದ ಐದು ವರ್ಷಗಳಿಂದಲೂ ಪಿಎಸ್‍ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿಗಾಗಿ ನಡೆದಂತಹ ಪ್ರಕರಣವನ್ನು ಬಗೆಹರಿಸಿ, ನೇಮಕಾತಿ ಮಾಡಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವೆಡೆ, ಅಗತ್ಯ ಇರುವ ಕಡೆಗಳಲ್ಲಿ ಪಿಎಸ್‍ಐಗಳ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಪೊಲೀಸ್ ಕಾನ್ಸ್‍ಟೇಬಲ್‍ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು” ಎಂದರು.

“ಕರಾವಳಿ ಮುಂತಾದೆಡೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯ ಪಡೆಯನ್ನು ನೇಮಿಸಿದ್ದೇವೆ. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನಾವು ಜಾರಿ ಮಾಡಲಾಗಿದೆ. 50 ಮನೆಗೆ ಒಂದು ಕ್ಲಸ್ಟರ್‌ನಂತೆ ಮಾಡಿ, ಪೊಲೀಸ್ ಪೇದೆ ಅವರು ಮನೆ ಮನೆಗೆ ಭೇಟಿ ನೀಡಿ, ಆಯಾ ಮನೆಗಳಲ್ಲಿನ ಕುಟುಂಬಗಳಿಂದ ಸಮಸ್ಯೆಗಳ ಬಗ್ಗೆ ನಿಗದಿತ ಪ್ರಶ್ನೆಗಳನ್ನು ಕೇಳಿ ವಿವರ ಪಡೆಯುತ್ತಾರೆ. ಇದು ಜನರಿಂದಲೂ ಪ್ರಶಂಸೆಗೆ ಒಳಗಾಗಿದೆ” ಎಂದು ಹೇಳಿದರು.

“ಮಹಿಳೆಯರ ಸುರಕ್ಷತೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಕ್ಕ-ಪಡೆ ರಚಿಸಲಾಗುತ್ತಿದ್ದು, ಇದೂ ಕೂಡ ಮೆಚ್ಚುಗೆ ಪಡೆದುಕೊಂಡಿದೆ. ರಾಜ್ಯದಲ್ಲಿ ಇದರಿಂದ ಅಪರಾಧಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವಿಶೇಷವಾಗಿ ಕರಾವಳಿ ಪ್ರದೇಶವನ್ನು ಸುರಕ್ಷಿತ ಪ್ರದೇಶವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...