ಮುಂದಿನ ಎರಡು ದಿನ ರಾಜ್ಯದ ಹಲವೆಡೆ ಭಾರೀ ಮಳೆ; ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Date:

ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು ಇಂದು ಕೂಡಾ ವರುಣನ ಅಬ್ಬರ ಮುಂದುವರಿಯಲಿದೆ.

- Advertisement -

ಇಂದು ಕರಾವಳಿ ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಗುಲ್ಬರ್ಗ, ಬೀದರ್, ಯಾದಗಿರಿ, ಹಾಸನ, ಚಾಮರಾಜನಗರದಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇನ್ನು ಮುಂದಿನ ಎರಡು ದಿನಗಳ ಕಾಲ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಕೊಡಗು ಹಾಸನದಲ್ಲಿಯೂ ಮಳೆ ತೀವ್ರವಾಗಿರಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ?  ಭಾರೀ ಮಳೆ | ತಾಪ ಏರಿಕೆಯಿಂದ ದೆಹಲಿಗೆ ಮುಕ್ತಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸೋಮವಾರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೆೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ವಿಜಯಪುರ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ಬೀದರ್‌ನ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ . ದಕ್ಷಿಣ ಒಳನಾಡಿನ ದಾವಣಗೆರೆ, ತುಂಕೂರ್, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...