ತಾಯಿ-ಶಿಶುಗಳ ಮರಣ ಪ್ರಮಾಣ ಕನಿಷ್ಠ ಮಟ್ಟಕ್ಕೆ ಇಳಿಸುವುದು ಆದ್ಯತೆ: ಸಚಿವ ದಿನೇಶ್ ಗುಂಡೂರಾವ್

Date:

Advertisements

ದಕ್ಷಿಣ ಭಾರತದ ರಾಜ್ಯಗಳಲ್ಲೆ ಅತಿ ಹೆಚ್ಚು ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ನಮ್ಮ ರಾಜ್ಯದಲ್ಲಿದೆ. ಇದನ್ನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಸಬೇಕು ಎಂಬುದು ನಮ್ಮ ಆದ್ಯತೆಯಾಗಿದೆ. ಆದುದರಿಂದ, ತಾಯಿ ಮತ್ತು ಮಕ್ಕಳ ಆರೋಗ್ಯ ತ್ರಿವಳಿ ತಜ್ಞರ(ಸ್ತ್ರೀ ರೋಗ ತಜ್ಞರು, ಅರವಳಿಕೆ ತಜ್ಞರು ಮತ್ತು ಮಕ್ಕಳ ತಜ್ಞರು)ನ್ನು ತರ್ಕಬದ್ಧಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಶುಕ್ರವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ಕೇರಳದಲ್ಲಿ ಒಂದು ಲಕ್ಷಕ್ಕೆ 20 ಇದ್ದರೆ, ನಮ್ಮ ರಾಜ್ಯದಲ್ಲಿ 61-62 ಇದೆ. ನಮ್ಮ ಸರಕಾರ ಆರೋಗ್ಯ ಇಲಾಖೆಯಲ್ಲಿ ಕೈಗೊಂಡ ಸುಧಾರಣೆಗಳ ಪರಿಣಾಮವಾಗಿ ಸುಮಾರು ಶೇ.25ರಷ್ಟು ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಎಲ್ಲ ತಾಲೂಕು ಆಸ್ಪತ್ರೆಗಳು 24/7 ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಾಲೂಕು ಆಸ್ಪತ್ರೆಗಳನ್ನು ಸಮಗ್ರ ‘ಸಮಗ್ರ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆ’ ಕೇಂದ್ರಗಳಾಗಿ ರೂಪಿಸಲಾಗುವುದು. ತಿಂಗಳಿಗೆ ಸರಾಸರಿ 30 ಅಥವಾ ಅದಕ್ಕಿಂತ ಹೆಚ್ಚಿನ ಹೆರಿಗೆ ಮಾಡಿಸುತ್ತಿರುವ 41 ಸಮುದಾಯ ಆರೋಗ್ಯ ಕೇಂದ್ರಗಳನ್ನು ತ್ರಿವಳಿ ತಜ್ಞರ ಸೇವೆಗಳಿಗಾಗಿ ಉಳಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕಡಿಮೆ ಕಾರ್ಯನಿರ್ವಹಿಸುವ 230 ಸಮುದಾಯ ಆರೋಗ್ಯ ಕೇಂದ್ರಗಳಿಂದ ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ಮರು ನಿಯೋಜಿಸಲಾಗುವುದು. ಮಲೆ ಮಹದೇಶ್ವರ ಬೆಟ್ಟ, ಸಂತೇಮಾರಹಳ್ಳಿ, ತಲಕಾಡು, ಬನ್ನೂರು ಮುಂತಾದ ದೂರದ ಪ್ರದೇಶಗಳ ಸಮುದಾಯ ಆರೋಗ್ಯ ಕೇಂದ್ರಗಳನ್ನು ತಜ್ಞರೊಂದಿಗೆ ಉಳಿಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ರಮವಾಗಿ(4:4:2) ಸ್ತ್ರೀರೋಗ ತಜ್ಞರು-4, ಅರವಳಿಕೆ ತಜ್ಞರು-4 ಹಾಗೂ ಮಕ್ಕಳ ತಜ್ಞರು-2, ತಾಲೂಕು ಆಸ್ಪತ್ರೆ ಹಾಗೂ ಉತ್ತಮ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈ ಪ್ರಮಾಣವನ್ನು 2:2:2 ರೀತಿ ನಿಯೋಜಿಸಲಾಗುವುದು. ಇದರಿಂದ, ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ಯಾವುದೆ ಸಮಯದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದರೂ ಅವರಿಗೆ ತುರ್ತು ಆರೋಗ್ಯ ಸೇವೆ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

148 ತಾಲೂಕು ಆಸ್ಪತ್ರೆಗಳಲ್ಲಿ ಕೇವಲ 31 ಆಸ್ಪತ್ರೆಗಳಲ್ಲಿ ಮಾತ್ರ 100ಕ್ಕಿಂತ ಹೆಚ್ಚು ಹೆರಿಗೆಗಳು ಸಂಭವಿಸುತ್ತಿವೆ. ಹೆಚ್ಚಿನ ಆಸ್ಪತ್ರೆಗಳಲ್ಲಿ ಒಬ್ಬರೆ ತಜ್ಞರು ಕಾರ್ಯ ನಿರ್ವಹಿಸುತ್ತಿದ್ದಾರೆ. 24/7 ಸೇವೆ ನೀಡಲು ಸಾಕಷ್ಟು ಸಿಬ್ಬಂದಿ ಲಭ್ಯವಿಲ್ಲ. ಕಡಿಮೆ ಕಾರ್ಯನಿರ್ವಹಿಸುವ 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಶುಶ್ರೂಷಕಾಧಿಕಾರಿಗಳನ್ನು(ಸ್ಟಾಫ್ ನರ್ಸ್) ಮರು ನಿಯೋಜಿಸಿ ‘ಸಮಗ್ರ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆ’ ಆಸ್ಪತ್ರೆಗಳನ್ನಾಗಿ ಬಲಪಡಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರತಿಯೊಂದು ಸಮಗ್ರ ತುರ್ತು ಪ್ರಸೂತಿ ಮತ್ತು ನವಜಾತ ಶಿಶು ಆರೈಕೆ ಆಸ್ಪತ್ರೆಯಲ್ಲಿ 3 ಹೆಚ್ಚುವರಿ ನರ್ಸ್‍ಗಳನ್ನು ನಿಯೋಜನೆ ಮಾಡಲಾಗುವುದು. ಗರ್ಭಿಣಿಯರಿಗೆ ಜನಜಾಗೃತಿ ತರಬೇತಿ(ಸಾಮಾನ್ಯ, ಸಿಸೇರಿಯನ್ ಹೆರಿಗೆಗಳ ಮಾಹಿತಿ, ಪೋಷಣೆ, ರೋಗ ನಿರೋಧಕ ಚುಚ್ಚುಮದ್ದು, ಕುಟುಂಬ ಕಲ್ಯಾಣ ಯೋಜನೆಗಳ ಅರಿವು) ನೀಡಲಾಗುವುದು ಎಂದು ಅವರು ಹೇಳಿದರು.

114 ಹೊಸ ರೇಡಿಯಾಲಜಿಸ್ಟ್ ಹುದ್ದೆಗಳನ್ನು ರಚಿಸಲಾಗುವುದು. ಇನ್ನೂ 15 ದಿನಗಳಲ್ಲಿ 220 ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಗ್ರಾಮೀಣ ಸೇವೆ ಕಡ್ಡಾಯ ಕಾನೂನಿನಡಿ ಎಂಬಿಬಿಎಸ್ ವೈದ್ಯರ ಸೇವೆಯನ್ನು ಪಡೆಯಲಾಗುತ್ತಿದೆ. ಅದೇ ರೀತಿ ಪಿ.ಜಿ ಮಾಡಿರುವ ವೈದ್ಯರ ಸೇವೆಯನ್ನು ಬಳಸಿಕೊಳ್ಳುವ ಚರ್ಚೆ ನಡೆಯುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವುದರಿಂದ ಜಿಲ್ಲಾ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಇದಲ್ಲದೆ, ಆಸ್ಪತ್ರೆಗಳಲ್ಲಿ ರಕ್ತದ ಪ್ಲಾಸ್ಮಾ ಸಂಗ್ರಹ ಮಾಡಲು ಆದೇಶ ನೀಡಲಾಗಿದೆ. ಇದಲ್ಲದೆ, ರಕ್ತ ಹೀನತೆಯಿಂದ ಬಳಲುವ ಸ್ತ್ರೀಯರಿಗೆ ಎಫ್‍ಸಿಎಂ ಚುಚ್ಚುಮದ್ದು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ 148 ತಾಲೂಕು ಆಸ್ಪತ್ರೆಗಳಲ್ಲಿ 11 ಸ್ತ್ರೀರೋಗ ತಜ್ಞರ ಹುದ್ದೆಗಳು ಖಾಲಿ. 274 ಸಮುದಾಯ ಆರೋಗ್ಯ ಕೇಂದ್ರಗಳ ಪೈಕಿ 114 ಸ್ತ್ರೀರೋಗ ತಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ. 21 ಆಸ್ಪತ್ರೆಗಳಲ್ಲಿ ಅರವಳಿಕೆ ತಜ್ಞರು ಇಲ್ಲ. 274 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 86 ಅರವಳಿಕೆ ತಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ. 148 ತಾಲೂಕು ಆಸ್ಪತ್ರೆಗಳ ಪೈಕಿ 109ರಲ್ಲಿ ಮಾತ್ರ ಮಕ್ಕಳ ತಜ್ಞರಿದ್ದಾರೆ. ರೇಡಿಯಾಲಜಿಸ್ಟ್‌ ಗಳು 189 ಆಸ್ಪತ್ರೆಗಳಿಗೆ ಬೇಕಾಗಿದ್ದು, ಸದ್ಯ 75 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X