ಚಿಕ್ಕಮಗಳೂರು: ಪ್ರೀತಿಸಿದವನ ಜೊತೆ ಮಗಳ ಮದುವೆ ಮಾಡಿಸಿದ್ದಕ್ಕೆ ತಂದೆ-ತಾಯಿಯನ್ನು ಬಹಿಷ್ಕರಿಸಿದ ಸಂಬಂಧಿಕರು?

Date:

ಭೋವಿ ಜನಾಂಗಕ್ಕೆ ಸೇರಿದ ಯುವತಿ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದ್ದು, ಪ್ರೀತಿಸಿದವನ ಜೊತೆಯೇ ಮದುವೆ ಮಾಡಿದ್ದಕ್ಕೆ ಅಪ್ಪ-ಅಮ್ಮನಿಗೆ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಭೋವಿ ಕಾಲೋನಿಯಲ್ಲಿ ನಡೆದಿದೆ.

- Advertisement -

ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಭೋವಿ ಕಾಲೋನಿಯ ಜಯಮ್ಮ ಎಂಬುವರಿಗೆ ನಾಲ್ಕು ಜನ ಹೆಣ್ಣು ಮಕ್ಕಳು. ಓರ್ವ ಗಂಡು ಮಗ. ನಾಲ್ಕರಲ್ಲಿ ಮೂರು ಜನ ಹೆಣ್ಣು ಮಕ್ಕಳಿಗೆ ಭೋವಿ ಜನಾಂಗಕ್ಕೆ ಸೇರಿದ ಯುವಕರಿಗೆ ಕೊಟ್ಟು ಮದುವೆ ಮಾಡಿದ್ದರು. ಆದರೆ, ಕೊನೆಯ ಮಗಳನ್ನು ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನಿಗೆ, ಮನೆಯವರು ಎಲ್ಲರೂ ಒಪ್ಪಿ ಮದುವೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಆದರೆ, ಭೋವಿ ಜನಾಂಗದ ಹುಡುಗಿಯನ್ನು ಆದಿ ಕರ್ನಾಟಕದ ಯುವಕನಿಗೆ ಏಕೆ ಕೊಟ್ಟಿರಿ ಎಂದು ಕಳೆದೊಂದು ವರ್ಷದಿಂದ ಜಯಮ್ಮ ಕುಟುಂಬಕ್ಕೆ ಅದೇ ಭೋವಿ ಜನಾಂಗದವರು ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. ಮಗಳನ್ನು ಆದಿ ಕರ್ನಾಟಕದ ಜನಾಂಗದ ಯುವಕನಿಗೆ ಕೊಟ್ಟಿದ್ದಕ್ಕೆ ತಮ್ಮ ಜನಾಂಗದ ಜನ ನಮಗೇ ಬಹಿಷ್ಕಾರ ಹಾಕಿದ್ದಾರೆ ಎಂದು ನೊಂದ ಮಹಿಳೆ ಜಯಮ್ಮ ಜಿಲ್ಲಾಧಿಕಾರಿಗೆ ದೂರು ನೀಡಲು ಅರ್ಜಿ ಹಿಡಿದು ಅಲೆದಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಇನ್ನು ಬಹಿಷ್ಕಾರ ಹಾಕಿರೋದು ಓರ್ವ ಶಿಕ್ಷಕನಂತೆ. ಅಲ್ಲದೆ, ಜಯಮ್ಮ ಅವರನ್ನು ಊರಿನ ಭೋವಿ ಜನಾಂಗದ ಜನ ಮಾತನಾಡಿಸುವುದನ್ನೇ ಬಿಟ್ಟಿದ್ದಾರೆ ಎನ್ನಲಾಗಿದೆ. ಜಯಮ್ಮ ಅವರನ್ನು ಯಾರು ಯಾವ ಕಾರ್ಯಕ್ರಮಕ್ಕೂ ಕರೆಯುವುದಿಲ್ಲ. ದೇವಸ್ಥಾನಕ್ಕೂ ಹೋಗುವಂತಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.

ಇದೀಗ, ಭೀಮ್ ಆರ್ಮಿ ಸಂಘಟನೆ ಮಹಿಳೆಯ ನೆರವಿಗೆ ಬಂದಿದ್ದು, ಪ್ರೀತಿಸಿ ಮದುವೆಯಾಗುವುದು ತಪ್ಪೇನಲ್ಲ. ಯಾರು-ಯಾರನ್ನು ಬೇಕಾದರೂ ವಿವಾಹ ಆಗಬಹುದು. ಅದು ಅವರ ಸ್ವಾತಂತ್ರ್ಯ. ಆದರೆ, ಜಾತಿ ಬಣ್ಣ ಕಟ್ಟಿ ಈ ರೀತಿ ಬಹಿಷ್ಕಾರ ಹಾಕುವುದು ಸರಿಯಲ್ಲ. ಈ ಬಗ್ಗೆ ಎಸ್‌ಸಿ-ಎಸ್‌ಟಿ ದೌರ್ಜನ್ಯ ಸಭೆಯಲ್ಲಿ ಚರ್ಚಿಸಿ ಅವರಿಗೆ ಸೂಕ್ತ ನ್ಯಾಯ ಕೊಡಿಸುತ್ತೇವೆ. ಈ ಬಗ್ಗೆ ಊರಿನ ಜನರಿಗೂ ಮನವರಿಕೆ ಮಾಡೋದಾಗಿ ಭೀಮ್ ಆರ್ಮಿ ಸಂಘಟನೆ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ನಾಳೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ; ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್...

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...