ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಿರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ: ಮೊಯ್ದಿನ್ ಕುಟ್ಟಿ

Date:

Advertisements

ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವು 1ನೇ ತರಗತಿಗೆ ದಾಖಲಾತಿಯ ವಯಸ್ಸನ್ನು ಸಡಿಲಗೊಳಿಸಿರುವುದು ಸರಿಯಲ್ಲ. ಹಲವು ನ್ಯಾಯಾಲಯಗಳ ತೀರ್ಪನ್ನು ಉಲ್ಲಂಘಿಸಿರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ಸಂಚಾಲಕ ಮೊಯ್ದಿನ್ ಕುಟ್ಟಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರ ಸಂವಿಧಾನ ಬದ್ದ ಕಾಯ್ದೆಯ ಉಲ್ಲಂಘನೆ ಮಾಡಿರುವುದಕ್ಕೆ ಪೋಷಕರ ಮನವಿಯನ್ನು ಉಲ್ಲೇಖಿಸಿದೆ. ಇದು ಮಕ್ಕಳ ಹಕ್ಕುಗಳ ಬಗ್ಗೆ ಈ ನೀತಿ ನಿರೂಪಕರಲ್ಲಿ ಯಾವುದೇ ರೀತಿಯ ಸ್ಪಷ್ಟ ನಿಲುವು ಇಲ್ಲ ಎನ್ನುವುದನ್ನು ತೋರಿಸುತ್ತದೆ. ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು 1ನೇ ತರಗತಿಯ ದಾಖಲಾತಿಗೆ 6 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಿರುವುದು, ಮಗುವಿನ ಒತ್ತಡರಹಿತ ಕಲಿಕೆಗೆ ಪೂರಕವಾಗಿದೆ. ಇದೆಲ್ಲವನ್ನು ಒಪ್ಪಿಕೊಳ್ಳುವ ಶಿಕ್ಷಣ ನೀತಿ ನಿರೂಪಕರು ಅದೇ ವಿಷಯಗಳನ್ನು ಉಲ್ಲಂಘಿಸಿರುತ್ತಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಏ.19ರಂದು ಮಹಾನಟಿ-2 ಆಡಿಷನ್

Advertisements

“ವರ್ಷಂಪ್ರತಿ ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಪೋಷಕರ ಮನವಿಯ ನೆಪ ಹೇಳಿಕೊಂಡು ದಾಖಲಾತಿ ವಯಸ್ಸಿನಲ್ಲಿ ಬದಲಾವಣೆ ಮಾಡುತ್ತಾ ಬರುತ್ತಿರುವುದು ಸಂವಿಧಾನದ ಅನುಚ್ಛೇದ 21(ಎ), ಶಿಕ್ಷಣ ಹಕ್ಕು ಕಾಯ್ದೆ-2009, ಕಡ್ಡಾಯ ಶಿಕ್ಷಣ ನಿಯಮಗಳು-2012 ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ-2020ರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರಿಂದ ಶಿಕ್ಷಣ ನೀತಿ ನಿರೂಪಣೆಯಂತಹ ಉನ್ನತ ಸ್ಥಾನದಲ್ಲಿದ್ದು ಮಕ್ಕಳ ಮಾನಸಿಕ ಬೆಳವಣಿಗೆಯ ಬಗ್ಗೆ ಚಿಂತಿಸದೆ ಮಕ್ಕಳ ಪೋಷಕರಿಗಾಗಿ ನಿಯಮ ಕಾಯ್ದೆಗಳನ್ನು ಬೇಕಾಬಿಟ್ಟಿ ಬದಲಾಯಿಸುತ್ತಾ ಇರುವುದನ್ನು ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ವಿರೋಧಿಸುತ್ತದೆ. ಶಿಕ್ಷಣ ಯಾವಾಗಲೂ ಮಕ್ಕಳ ಕೇಂದ್ರೀಕೃತ ಆಗಿರಬೇಕೇ ವಿನಃ ಪೋಷಕರ ಬೇಡಿಕೆಗಾಗಿ ಬದಲಾಯಿಸುವಂತಿರವಾರದು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X