BREAKING NEWS | ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್‌

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು. ಈ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ಈ ಮೂಲಕ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಅನ್ನು ಪುರಸ್ಕರಿಸಿದೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರಿನ ಕೆಸರೆ ಗ್ರಾಮದ 3.16 ಎಕರೆ ಭೂಮಿಗೆ ಬದಲಾಗಿ, ನಗರದ ಐಷಾರಾಮಿ ಬಡಾವಣೆಯಲ್ಲಿ 14 ಪರ್ಯಾಯ ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಮೂಲ ಭೂಮಿಯ ಮೌಲ್ಯಕ್ಕಿಂತ ಹಂಚಿಕೆ ಮಾಡಲಾದ ನಿವೇಶನಗಳ ಮೌಲ್ಯ ಹತ್ತಾರು ಪಟ್ಟು ಅಧಿಕ ಎಂದು ಸ್ನೇಹಮಯಿ ಕೃಷ್ಣ, ಟಿ.ಜೆ. ಅಬ್ರಹಾಂ ದೂರು ನೀಡಿದ್ದರು. ಈ ವಿವಾದದ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ಹಂಚಿಕೆಯಾಗಿದ್ದ 14 ನಿವೇಶನಗಳನ್ನು ಮುಡಾಕ್ಕೆ ಹಿಂತಿರುಗಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಮುಡಾ ಪ್ರಕರಣ: ಜೈಲಲ್ಲಿದ್ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಮತ್ತೆ ಲೋಕಾಯುಕ್ತ ಪೊಲೀಸ್‌ ವಶಕ್ಕೆ

ಈ ದೂರಿನ ಆಧಾರದಲ್ಲಿ ದೀರ್ಘ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಗೆಯೇ ಈ ಪ್ರಕರಣದಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ಭೂಮಾಲೀಕ ದೇವರಾಜು ಅವರಿಗೆ ಕ್ಲೀನ್‌ಚಿಟ್ ನೀಡಿದೆ. ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸೇರಿದಂತೆ ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರೆಯಲಿದೆ.

ಏನಿದು ಬಿ ರಿಪೋರ್ಟ್?

ಪೊಲೀಸ್ ತನಿಖೆಯ ಬಳಿಕ ನ್ಯಾಯಾಲಯಕ್ಕೆ ಸಲ್ಲಿಸುವ ಅಂತಿಮ ವರದಿಗಳಲ್ಲಿ ‘ಬಿ’ ರಿಪೋರ್ಟ್ ಅತಿ ಮುಖ್ಯವಾದುದ್ದು. ದೂರಿನಲ್ಲಿ ಉಲ್ಲೇಖಿಸಿದ ಆರೋಪಗಳು ಸುಳ್ಳು ಅಥವಾ ಆಧಾರರಹಿತ ಎಂದು ಪೊಲೀಸರಿಗೆ ಕಂಡುಬಂದಾಗ ಅವರು ಈ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸುತ್ತಾರೆ. ದೂರುದಾರರು ನೀಡಿದ ದೂರು ಉದ್ದೇಶಪೂರ್ವಕವಾಗಿ ಸುಳ್ಳು ಅಥವಾ ದುರುದ್ದೇಶಪೂರಿತವಾಗಿದೆ ಎಂಬುದು ತನಿಖೆಯಲ್ಲಿ ಸಾಬೀತಾದಾಗ ಈ ರಿಪೋರ್ಟ್ ಸಲ್ಲಿಸಲಾಗುತ್ತದೆ.

ಹಾಗೆಯೇ ಆರೋಪಿಯ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷ್ಯಗಳು ಸಿಗದಿದ್ದ ಸಂದರ್ಭದಲ್ಲಿಯೂ ಈ ವರದಿಯನ್ನು ಸಲ್ಲಿಸಲಾಗುತ್ತದೆ. ಈ ವರದಿಯನ್ನು ನ್ಯಾಯಾಲಯವು ಅಂಗೀಕರಿಸಿದರೆ, ಆರೋಪಿಗಳು ದೋಷಮುಕ್ತರಾಗುತ್ತಾರೆ. ಇದೀಗ ಮುಡಾ ಪ್ರಕರಣದಲ್ಲಿ ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಪುರಸ್ಕರಿಸುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ದೋಷಮುಕ್ತರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...