ರಾಜಭವನಕ್ಕೆ ‘ಲೋಕಭವನ’ ಹೆಸರು ಹಿಂದಿ ಹೇರಿಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ; ಜಾಗೃತ ಕರ್ನಾಟಕ ಆಕ್ರೋಶ

Date:

ಕೇಂದ್ರ ಸರ್ಕಾರದಿಂದ ‘ರಾಜಭವನ’ಗಳನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಜಾಗೃತ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಈ ಕ್ರಮವು ಹಿಂದಿಯ ಪರೋಕ್ಷ ಹೇರಿಕೆಯಾಗಿದ್ದು, ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲೆ ಆಕ್ರಮಣವೆಂದು ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಈ ಮರುನಾಮಕರಣವು ಕೇವಲ ಸಾಂಕೇತಿಕ ಅಥವಾ ಆಡಳಿತಾತ್ಮಕ ಬದಲಾವಣೆಯಲ್ಲ. ‘ಅಧಿಕೃತ ಸಾರ್ವಜನಿಕ ವಲಯದಲ್ಲಿ, ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಲ್ಲದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ಜಾಗೃತ ಕರ್ನಾಟಕ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಂವಿಧಾನದ 343ನೇ ವಿಧಿ ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳನ್ನಾಗಿ ಗುರುತಿಸಲಾಗಿದ್ದರೂ, 345ನೇ ವಿಧಿ ಮತ್ತು 346ನೇ ವಿಧಿ ರಾಜ್ಯಗಳಿಗೆ ಭಾಷಾ ವಿಚಾರದಲ್ಲಿ ಸ್ವಾಯತ್ತತೆ ನೀಡಿವೆ ಎಂದು ಸಂಘಟನೆ ನೆನಪಿಸಿದೆ. ‘‘ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರ’’. ಈ ಮರುನಾಮಕರಣ ಮಾತ್ರ ಪ್ರತ್ಯೇಕ ಘಟನೆಯಲ್ಲ. ಇತ್ತೀಚಿನ ವರ್ಷಗಳಲ್ಲಿ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಪ್ರಮುಖ ಕಾನೂನುಗಳನ್ನು ಹಿಂದಿ ಶೀರ್ಷಿಕೆಗಳೊಂದಿಗೆ ಜಾರಿಗೆ ತರುವುದು, ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚಿನ ಆದ್ಯತೆ ನೀಡುವುದು – ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಸಂಘಟನೆ ಕಿಡಿಕಾರಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

ಅಲ್ಲದೇ ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ಜಾಗೃತ ಕರ್ನಾಟಕವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಜಾಗೃತ ಕರ್ನಾಟಕ ಮನದಟ್ಟು ಮಾಡಿದೆ.

ಕೇಂದ್ರದ ಏಕರೂಪ ಹಿಂದಿ ನಾಮಕರಣಕ್ಕೆ ವಿರೋಧವೇ ಆಕ್ಷೇಪದ ಮೂಲ ಎಂದು ತಿಳಿಸಿರುವ ಸಂಘಟನೆ, ರಾಜ್ಯಗಳು ತಮ್ಮ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆ ಮಾಡುವ ಸಾಂವಿಧಾನಿಕ ಹಕ್ಕನ್ನು ಹೊಂದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯ ಸರ್ಕಾರಗಗಳು ‘ರಾಜಭವನ’ವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು ಹಾಗೂ ಮರುನಾಮಕರಣ ಅಗತ್ಯವಿದ್ದರೆ ರಾಜ್ಯ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆ ಮಾಡಬೇಕು. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ಅಧಿಕೃತ ಆಕ್ಷೇಪಣೆ ಸಲ್ಲಿಸಬೇಕು ಎಂದು ಜಾಗೃತ ಕರ್ನಾಟಕ ಮನವಿ ಮಾಡಿದೆ.

ಹಾಗೆಯೇ ದೇಶದ ಎಲ್ಲಾ‌ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಜಾಗೃತ ಕರ್ನಾಟಕ ಪತ್ರವನ್ನು ಕೂಡ ಬರೆದಿದೆ.

‘‘ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಬಹುತ್ವದಲ್ಲಿ ನೆಲೆಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದೇ ಸಂವಿಧಾನದ ಆಶಯವನ್ನು ನಿಜವಾಗಿ ಎತ್ತಿಹಿಡಿಯುವುದು’’ ಎಂದು ಜಾಗೃತ ಕರ್ನಾಟಕ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...