Breaking | ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಬಂಧನ ಬೆನ್ನಲ್ಲೇ ನಟ ದರ್ಶನ್‌ ಪೊಲೀಸ್‌ ವಶಕ್ಕೆ

Date:

ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಎ2 ಆರೋಪಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅಪಾರ್ಟ್‌ ಮೆಂಟ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

ಇನ್ನೋವಾ ಕಾರಿನಲ್ಲಿ ಹಿಂದಿನ ಗೇಟ್ ನಿಂದ ನಿವಾಸಕ್ಕೆ ಬಂದ ಅವರಿಗೆ ಪೊಲೀಸರು, ಬಂಧನಕ ವಿಚಾರ ತಿಳಿಸಿ, ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಐವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಅವರು ತಕ್ಷಣದಿಂದಲೇ ಬಂಧಿಸಿ ಜೈಲಿಗೆ ಹಾಕಬೇಕು ಎಂದು ಸುಪ್ರೀಂಕೋರ್ಟ್ ತೀರ್ಪುನಲ್ಲಿ ಹೇಳಿದೆ. ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಆರ್. ಮಹಾದೇವನ್ ಅವರ ಪೀಠ ಮಹತ್ವದ ಆದೇಶ ಹೊರಡಿಸಿದೆ. ದರ್ಶನ್, ಪವಿತ್ರಾ ಗೌಡ ಅವರನ್ನು ತಕ್ಷಣದಿಂದಲೇ ಜೈಲಿಗೆ ಹಾಕಬೇಕು ಎಂದು ತೀರ್ಪಿನಲ್ಲಿ ಹೇಳಿದೆ.

ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ ತಾಯಿ ಎದುರು ಬಿಕ್ಕಳಿಸಿ ಅತ್ತಿದ್ದಾರೆ. ಈ ವೇಳೆ ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದರು. ಮನೆಯ ಬಾಗಿಲು ತೆರೆದಂತೆ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ ತೀರ್ಪು ಹೊರಬರುವ ಮುನ್ನ ಪವಿತ್ರಾ ಗೌಡ ದೇವರ ಮೊರೆ ಹೋಗಿದ್ದರು. ಜೊತೆಗೆ ಮನೆಯಲ್ಲಿ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ್ದರು. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಕೂಡ ಹಂಚಿಕೊಂಡಿದ್ದರು.

ನಟ ದರ್ಶನ್‌ ಎಲ್ಲಿದ್ದರು

ನಟ ದರ್ಶನ್‌ಗೆ ಪೊಲೀಸರ ಮುಂದೆ ಶರಣಾಗಲು ಒಂದು ದಿನದ ಅವಕಾಶ ನೀಡಲಾಗಿತ್ತು. ಆದರೆ ಈಗ ದರ್ಶನ್‌ ಬೆಂಗಳೂರಿನಲ್ಲಿ ಇಲ್ಲ ಎನ್ನುವ ಮಾಹಿತಿ ಲಭ್ಯವಾಗಿತ್ತು. ಮೂಲಗಳ ಪ್ರಕಾರ ನಟ ದರ್ಶನ್‌ ತಮಿಳುನಾಡಿನ ಪ್ರಖ್ಯಾತ ದೇವಸ್ಥಾನಕ್ಕೆ ತೆರಳಿದ್ದರು. ದರ್ಶನ್‌ ಬೆಂಗಳೂರಿಗೆ ವಾಪಸ್‌ ಅದ ಹಿನ್ನೆಲೆಯಲ್ಲಿ ಬಂಧನವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...