ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ನ್ಯಾಯಾಲಯ

Date:

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ‘ಮಾಫಿ ಸಾಕ್ಷಿ’ (ಅಪ್ರೂವರ್) ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್‌ (CCH) ನ್ಯಾಯಾಲಯವು ಅಂಗೀಕರಿಸಿದೆ.

- Advertisement -

​ಈ ಕುರಿತು ವಿಚಾರಣೆ ನಡೆಸಿದ ನ್ಯಾಯಪೀಠವು, ಆರೋಪಿ ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ್ದು, ಆತನನ್ನು ಈ ಪ್ರಕರಣದಲ್ಲಿ ಅಧಿಕೃತವಾಗಿ ಸಾಕ್ಷಿಯನ್ನಾಗಿ ಪರಿಗಣಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗುತ್ತಿರುವುದರಿಂದ ಕೊಲೆ ಪ್ರಕರಣದ ತನಿಖೆ ಹಾಗೂ ವಿಚಾರಣೆಯ ಹಂತದಲ್ಲಿ ಮಹತ್ವದ ತಿರುವು ಸಿಕ್ಕಂತಾಗಿದ್ದು, ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳ ವಿರುದ್ಧ ಮತ್ತಷ್ಟು ಪ್ರಬಲ ಸಾಕ್ಷ್ಯ ಒದಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ಮಾಫಿ ಸಾಕ್ಷಿಯಾಗಲು ಸಮ್ಮತಿ ಸೂಚಿಸಿರುವ ನ್ಯಾಯಾಲಯವು, ಪ್ರದೋಷ್‌ಗೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ತಿಳಿದಿರುವ ಸಂಪೂರ್ಣ ಸತ್ಯಾಂಶಗಳನ್ನು ಆತ ನ್ಯಾಯಾಲಯದ ಮುಂದೆ ಎಳೆಎಳೆಯಾಗಿ ಬಿಚ್ಚಿಡಬೇಕು ಎಂದು ಸೂಚಿಸಿದೆ.

​ಒಂದು ವೇಳೆ ನ್ಯಾಯಾಲಯದ ಮುಂದೆ ಯಾವುದೇ ವಿಚಾರವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟರೆ ಅಥವಾ ಷರತ್ತುಗಳನ್ನು ಉಲ್ಲಂಘಿಸಿ ಸುಳ್ಳು ಸಾಕ್ಷಿ ನುಡಿದರೆ, ಮಾಫಿ ಸಾಕ್ಷಿ ಸ್ಥಾನವನ್ನು ರದ್ದುಗೊಳಿಸಿ ಆತನನ್ನು ಮರಳಿ ಆರೋಪಿಯನ್ನಾಗಿಯೇ ಪರಿಗಣಿಸಲಾಗುವುದು. ಜೊತೆಗೆ, ಸುಳ್ಳು ಸಾಕ್ಷಿ ನುಡಿದದ್ದಕ್ಕಾಗಿ ಆತನ ವಿರುದ್ಧ ಪ್ರತ್ಯೇಕ ಪ್ರಕರಣವನ್ನೂ ದಾಖಲಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

​ಇದರ ಜೊತೆಗೆ, ಪ್ರಕರಣದ ಸಂಪೂರ್ಣ ವಿಚಾರಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ಪ್ರದೋಷ್ ಕಡ್ಡಾಯವಾಗಿ ಜೈಲಿನಲ್ಲಿಯೇ ಇರಬೇಕು ಎಂದು ನ್ಯಾಯಾಲಯವು ತನ್ನ ಷರತ್ತಿನಲ್ಲಿ ಸ್ಪಷ್ಟಪಡಿಸಿದೆ. ತನ್ನದೇ ಆಪ್ತ ವಲಯದಲ್ಲಿದ್ದ ಆರೋಪಿಯೊಬ್ಬ ಇದೀಗ ಸರ್ಕಾರದ ಪರ ಸಾಕ್ಷಿಯಾಗಿ ಬದಲಾಗಿರುವುದು ನಟ ದರ್ಶನ್‌ ಪಾಲಿಗೆ ಕಾನೂನು ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...