ರೇಣುಕಾಸ್ವಾಮಿ ಕೊಲೆ | ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಫಜೀತಿ?

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಫಜೀತಿ ಎದುರಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

- Advertisement -

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ನಟ ದರ್ಶನ್‌ ಮತ್ತವನ ಗ್ಯಾಂಗ್‌ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಾಧಾರಣವಾಗಿ ಪ್ರಕರಣವು ತನಿಖಾ ಹಂತದಲ್ಲಿರುವಾಗ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಆದರೆ, ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ಅವರು ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ಪಶ್ಚಿಮ ವಿಭಾಗದ ಪೊಲೀಸರು ಶೀಘ್ರವೇ ನೋಟಿಸ್‌ ನೀಡುವ ಸಾಧ್ಯತೆಯಿದೆ.

ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು‌ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸಬಹುದು. ಇದರ ಜೊತೆಯಲ್ಲಿ ಸಾಕ್ಷಿ-ಆರೋಪಿ ಭೇಟಿ ಬಗ್ಗೆ ಜೈಲಾಧಿಕಾರಿಗಳ ಬಳಿಯೂ ಮಾಹಿತಿ ಪಡೆಯಬಹುದು. ಅಷ್ಟೇ ಅಲ್ಲದೇ ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ.

ಕಳೆದ ಜೂನ್ 8 ರಂದು ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು. ಪಾರ್ಟಿ ಬಳಿಕ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದರೆ ಚಿಕ್ಕಣ್ಣ ಮನೆಗೆ ತೆರಳಿದ್ದರು.

ಚಿಕ್ಕಣ್ಣ ಪ್ರಮುಖ ಸಾಕ್ಷಿ

ಯಾವುದೇ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆಸಿ ಸಾಕ್ಷಿಗಳನ್ನು ವಿಚಾರಣೆ ನಡೆಸುತ್ತಾರೆ. ಆದರೆ ಪ್ರಕರಣ ಒಂದರಲ್ಲಿ ಆ ವ್ಯಕ್ತಿಯ ಹೇಳಿಕೆ ಪ್ರಮುಖ ಸಾಕ್ಷಿ ಆಗಲಿದೆ ಎಂದಾದರೆ ಮಾತ್ರ ಆ ವ್ಯಕ್ತಿಯನ್ನು ಜಡ್ಜ್‌ ಮುಂದೆ ಹಾಜರು ಪಡಿಸಿ ಹೇಳಿಕೆ ನೀಡಲಾಗುತ್ತದೆ.

ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ಪೊಲೀಸರು ದಾಖಲಿಸಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲೆಂದೇ ಪೊಲೀಸರು ಜಡ್ಜ್‌ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ನಡೆದ ದಿನ ದರ್ಶನ್ ಅವರ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಚಿಕ್ಕಣ್ಣ ಠಾಣೆಗೆ ಬಂದು ಪೊಲೀಸರು ಕೇಳಿದ ವಿವರಗಳನ್ನು ನೀಡಿದ್ದರೂ ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆಯನ್ನು ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...