ಗಣರಾಜ್ಯೋತ್ಸವ- 2025 | ಪ್ರಶಸ್ತಿಗಾಗಿ ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

Date:

Advertisements

ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Advertisements

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಲು ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X