ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಕೊಡಲು ಮನವಿ, ಸಿಎಂ ಭೇಟಿಯಾದ ನಟಿ ಭಾರತಿ & ಅಳಿಯ ಅನಿರುದ್ಧ

Date:

ಭಾರತಿ ವಿಷ್ಣುವರ್ಧನ್ ಅವರು ತಮ್ಮ ಅಳಿಯ ಅನಿರುದ್ಧ ಜೊತೆ ಬುಧವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

- Advertisement -

ಅಭಿಮಾನಿಗಳಿಗಾಗಿ ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣ ಮಾಡಿ ಗೌರವ ಸೂಚಿಸುವುದಕ್ಕೆ 10 ಗುಂಟೆ ಜಾಗವನ್ನು ನೀಡಬೇಕಾಗಿ ಮತ್ತು ಮರಣೋತ್ತರವಾಗಿ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

“ಪ್ರಮುಖವಾಗಿ ಮೈಸೂರು ನಗರದಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನಿರ್ಮಿಸಿ ಕನ್ನಡದ ಹೃದಯದಲ್ಲಿ ವಿಷ್ಣುವರ್ಧನ್ ಅವರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ, ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇದು ಲಕ್ಷಾಂತರ ಅಭಿಮಾನಿಗಳ ಹೆಮ್ಮೆಯ ವಿಷಯವಾಗಿದೆ. ಆದರೆ, ಬೆಂಗಳೂರು ನಗರದಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ದೀರ್ಘಕಾಲದ ಬೇಡಿಕೆಯನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ” ಎಂದಿದ್ದಾರೆ.

“ಡಾ.ವಿಷ್ಣುವರ್ಧನ್ ಅವರು ಬದುಕನ್ನು ರೂಪಿಸಿಕೊಂಡಿದ್ದೇ ಬೆಂಗಳೂರಿನಲ್ಲಿ. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಏಕೆಂದರೆ, ಇಲ್ಲಿಯೇ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನೇರವೇರಿದ್ದು. ಲಕ್ಷಾಂತರ ಅಭಿಮಾನಿಗಳು ಆಗಮಿಸಿ ತಮ್ಮ ಪ್ರೀತಿಯ ಕಲಾವಿದನಿಗೆ ಕಂಬನಿ ಮಿಡಿದಿದ್ದರು. ಅಭಿಮಾನ್ ಸ್ಟುಡಿಯೋ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಾವು ಮನವಿ ಮಾಡಿಕೊಳ್ಳುವುದು ಏನೆಂದರೆ, ಅಭಿಮಾನ್ ಸ್ಟುಡಿಯೋ ವ್ಯಾಪ್ತಿಯಲ್ಲಿ ಕನಿಷ್ಠ 10 ಗುಂಟೆ ಜಾಗವನ್ನು ಮೀಸಲಿಟ್ಟು- ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ನೀಡಬೇಕೆಂದು ಕೋರುತ್ತೇವೆ. ಇದರಿಂದ ಅಭಿಮಾನಿಗಳ ಭಾವನೆಗಳಿಗೆ ನ್ಯಾಯವನ್ನು ದೊರಕಿಸುವ ಜತೆಗೆ- ಒಂದು ಶಾಶ್ವತ ಸಾಂಸ್ಕೃತಿಕ ಸ್ಮಾರಕವಾಗಿ ಉಳಿದು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ” ಎಂದು ಸಿ.ಎಂ. ಸಿದ್ಧರಾಮಯ್ಯಗೆ ಸಲ್ಲಿಸಿದ ಪತ್ರದಲ್ಲಿ ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಸಮಾಧಿಯನ್ನು ಇತ್ತೀಚೆಗೆ ಕೆಡವಿ ಹಾಕಿ ಭಾರೀ ವಿವಾದ ಉಂಟಾಗಿತ್ತು. ಈ ಸಂಬಂಧ ವಿಷ್ಣು ಅಭಿಮಾನಿಗಳು ಹಾಗೂ ಹಿರಿಯ ನಟ ದಿವಂಗತ ಬಾಲಕೃಷ್ಣ ಅವರ ಕುಟುಂಬಕ್ಕೂ ಜಟಾಪಟಿ ನಡೆಯುತ್ತಲೇ ಇತ್ತು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿ ಇತ್ತೀಚೆಗೆ ಕೋರ್ಟ್ ಅನುಮತಿಯ ಮೇರೆಗೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಸ್ಮಾರಕವನ್ನು ಉರುಳಿಸಲಾಗಿತ್ತು.

ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವಿದೆ. ಅಭಿಮಾನಿಗಳು ಸಂಭ್ರಮದಿಂದ ಆಚರಿಸಲು ಮುಂದಾಗಿದ್ದಾರೆ. ನಿನ್ನೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...