ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು; ಸಿಎಂಗೆ ಅಭಿನಂದನೆ ಸಲ್ಲಿಸಿದ ಉಡಚಪ್ಪ ಮಾಳಗಿ

Date:

ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.

- Advertisement -

ಪತ್ರಿಕಾ ಹೇಳಿಕೆ ಬಿಡುಗಡರ ಮಾಡಿರುವ ಅವರು, “ಡಿಸೆಂಬರ್ 21ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಈ ಮೀಸಲು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಕಡ್ಡಾಯವಾಗಿದ್ದು, ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ. ಡಾಟಾ ಎಂಟ್ರಿ ಅಪರೇಟರ್, ವಾಹನ ಚಾಲಕರು, ಗ್ರೂಪ್-ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ನು ಮುಂದೆ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ವ್ಯವಸ್ಥೆ ಜಾರಿ ಮಾಡಲಾಗಿದೆ.ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ನೀಡುವಂತೆ ವಿವಿಧ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬರುತ್ತಿದ್ದವು. ಈಗ ಸರ್ಕಾರದ ಆದೇಶ ಬಂದಿದ್ದು,ಈ ಆದೇಶದಿಂದ ಸಾಮಾಜಿಕ ನ್ಯಾಯ ಸಿಗುವಂತಾಗಲಿ ಮತ್ತು ಸಂಬಂಧಿಸಿದ ಎಲ್ಲಾ ಇಲಖೆಗಳು ಕಡ್ಡಾಯ ಆದೇಶ ಪಾಲನೆ ಮಾಡುವಂತೆ ಸರ್ಕಾರ ಕಾಳಜಿವಹಿಸುವಂಗಬೇಕು” ಎಂಧು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...