ಪಂಚ ಗ್ಯಾರಂಟಿ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆ: ಲಂಡನ್ ಕಿಂಗ್ಸ್ ಕಾಲೇಜು, ಸಿಎಸ್‌ಡಿಎಸ್‌, ಲೋಕನೀತಿ ಸಮೀಕ್ಷೆ

Date:

ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ.

ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ ದೇಶದ ಬಹುತೇಕ ರಾಜ್ಯಗಳ ಜನರ ಕೊಳ್ಳುವ ಶಕ್ತಿಯು ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರುವಾಗ ಕರ್ನಾಟಕದ ಜನರ ಕೊಳ್ಳುವ ಶಕ್ತಿಯು ನಿಗದಿತವಾದ ಆರ್ಥಿಕ ಮಾನದಂಡಗಳಿಗೆ ಅನುಗುಣವಾಗಿದೆ. ಇದಕ್ಕೆ ಮುಖ್ಯ ಕಾರಣ ‘ಯೂನಿವರ್ಸಲ್ ಬೇಸಿಕ್ ಇನ್ಕಂ’ ಎಂಬ ತತ್ವವನ್ನಾಧರಿಸಿ ಕ್ರಾಂತಿಕಾರಕ ಮಾದರಿಯಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬುದು ಸಾಬೀತಾಗಿದೆ.

- Advertisement -

ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಎಂಬ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಇವುಗಳಿಗೆ ಇದುವರೆಗೆ 1,16,706 ಕೋಟಿ ರೂಗಳನ್ನು ವಿನಿಯೋಗಿಸಲಾಗಿದೆ. ಈ ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲು FPI ಮೂಲಕ ಕಿಂಗ್ಸ್ ಕಾಲೇಜ್ ಲಂಡನ್, ಜಸ್ಟ್ ಜಾಬ್ಸ್ ನೆಟ್ವರ್ಕ್, ಎಸ್‌ಕೆಡಿಆರ್ ಫೋರಮ್, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಇಂಡಸ್ ಆಕ್ಷನ್ ಹಾಗೂ ಲೋಕನೀತಿ/ಸಿಎಸ್‌ಡಿಎಸ್‌ನಂತಹ ಪ್ರತಿಷ್ಠಿತ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ʼಈ ದಿನʼ ಸಮೀಕ್ಷೆ | ರಾಜ್ಯದ ಗ್ಯಾರಂಟಿ ಯೋಜನೆಗಳಿಂದ ಬದುಕು ಹಸನಾಯ್ತು, ಕೇಂದ್ರದ್ದೆಲ್ಲ ಬೊಗಳೆ ಎಂದ ಜನತೆ

ಈ ಸಂಸ್ಥೆಗಳು ವ್ಯಾಪಕವಾಗಿ ನಡೆಸಿರುವ ಅಧ್ಯಯನಗಳು ರಾಜ್ಯದಲ್ಲಿ ಆಹಾರ ಭದ್ರತೆ, ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿರುವುದನ್ನು ದೃಢಪಡಿಸಿವೆ. ಜನರು ಗ್ಯಾರಂಟಿ ಯೋಜನೆಗಳ ಮೂಲಕ ಪಡೆಯುವ ಹಣವನ್ನು ಪೌಷ್ಠಿಕ ಆಹಾರ, ಔಷಧಗಳು ಮತ್ತು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸುತ್ತಿದ್ದಾರೆ.

ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ನಗದು ವರ್ಗಾವಣೆ ಪಡೆದ ಕುಟುಂಬಗಳ ಪ್ರಮಾಣ 2022 ರಲ್ಲಿ ಶೇ.9.3 ರಷ್ಟಿದ್ದದ್ದು 2024ರ ವೇಳೆಗೆ ಅದು ಶೇ.72.7ಕ್ಕೆ ಏರಿಕೆಯಾಗಿದೆ. ಇದು ಗ್ಯಾರಂಟಿ ಯೋಜನೆಗಳ ಸಾರ್ಥಕತೆಗೆ ಸಾಕ್ಷಿಯಾಗಿದೆ.

‘ಶಕ್ತಿ’ ಯೋಜನೆಯು ಮಹಿಳೆಯರ ಬದುಕಿನಲ್ಲಿ ಅಪಾರ ಚೈತನ್ಯ ತಂದಿದೆ. ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅಧ್ಯಯನದಂತೆ, ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳೂ ಸೇರಿದಂತೆ ಅನೇಕ ಮಾರ್ಗಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದ್ದು, ಇದು ನಗರದ ಚಲನಶೀಲತೆಯಲ್ಲಿ ಆದ ಪ್ರಮುಖ ಬದಲಾವಣೆಯಾಗಿದೆ. ಈ ಯೋಜನೆಯಿಂದ ಪ್ರತಿ ಮಹಿಳೆಗೆ ಮಾಸಿಕ ಸರಾಸರಿ ರೂ.1,500 ರಿಂದ 2,000 ಉಳಿತಾಯವಾಗುತ್ತಿದೆ. ರಾಜ್ಯದಾದ್ಯಂತ ಶೇ.19 ರಷ್ಟು ಮತ್ತು ಬೆಂಗಳೂರಿನಲ್ಲಿ ಶೇ.34ರಷ್ಟು ಮಹಿಳೆಯರು ಉತ್ತಮ ಸಂಬಳದ ಕೆಲಸಗಳನ್ನು ಪಡೆಯಲು ಈ ಯೋಜನೆ ನೆರವಾಗಿದೆ. ಶೇ.83 ರಷ್ಟು ಜನರು ಉತ್ತಮ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿದೆ.

ಇದನ್ನು ಓದಿದ್ದೀರಾ? ಈದಿನ.ಕಾಮ್ ಸಮೀಕ್ಷೆ-5: ಸರ್ಕಾರದ ಯೋಜನೆಗಳ ʼಫಲʼ ಬಿಜೆಪಿಗೆ ಸಿಗದು; ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಇನ್ನೂ ಇಲ್ಲ ಗ್ಯಾರಂಟಿ

‘ಹಸಿವು ಮುಕ್ತ ಕರ್ನಾಟಕ’ದ ಕನಸನ್ನು ನನಸು ಮಾಡುತ್ತಿರುವ ‘ಅನ್ನಭಾಗ್ಯ’ ಯೋಜನೆಯಿಂದಾಗಿ ಶೇ.83 ರಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳಿಂದ ಆದ ಉಳಿತಾಯದ ಹಣದಲ್ಲಿ ಬೇಳೆಕಾಳು, ತರಕಾರಿ, ಹಣ್ಣು, ಮೊಟ್ಟೆ ಮತ್ತು ಮಾಂಸ ಮುಂತಾದ ಗುಣ ಮಟ್ಟದ ಆಹಾರ ಪದಾರ್ಥಗಳನ್ನು ಖರೀದಿಸುವ ಮೂಲಕ ಕುಟುಂಬದ ಪೌಷ್ಠಿಕತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

‘ಗೃಹಲಕ್ಷ್ಮಿ’ ಯೋಜನೆಯಿಂದ ಶೇ.80 ರಷ್ಟು ಮಹಿಳೆಯರು, ತಾವು ಹೆಚ್ಚು ಆರ್ಥಿಕವಾಗಿ ಸ್ವತಂತ್ರರಾಗಿರುವುದಾಗಿ ಹಾಗೂ ಕುಟುಂಬದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಶೇ.37ರಷ್ಟು ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಹಣವನ್ನು ಕುಟುಂಬದ ಹಳೆಯ ಸಾಲ ಮರುಪಾವತಿಸಲು ಬಳಸುವ ಮೂಲಕ ಸಾಲ ಮುಕ್ತರಾಗುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...

ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ...