ಈದ್‌-ಮಿಲಾದ್‌ ಮೆರವಣಿಗೆ ವೇಳೆ ಗಲಾಟೆ: ಪುನೀತ್‌ ಕೆರೆಹಳ್ಳಿ ಸೇರಿ 8 ಮಂದಿ ಬಂಧನ

Date:

ಈದ್‌-ಮಿಲಾದ್‌ ಮೆರವಣಿಗೆ ವೇಳೆ ಬೆಂಗಳೂರಿನ ಬಸವನಗುಡಿಯ ಎನ್‌ ಆರ್‌ ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಒಂದು ಗುಂಪಿನ ಮುಖಂಡ ಪುನೀತ್‌ ಕೆರೆಹಳ್ಳಿ ಸೇರಿದಂತೆ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

- Advertisement -

ಬುಧವಾರ ಈದ್‌-ಮಿಲಾದ್‌/ಮಿಲಾದುನ್ನಬಿ ಮೆರವಣಿಗೆ ನಡೆಯುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರು ಹಾಗೂ ಮತ್ತೊಂದು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತ ಮುರುಳಿ ಅವರ ತಲೆಗೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ಬಳಿಕ ಪುನೀತ್‌ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರು ರಸ್ತೆಯಲ್ಲೇ ಧರಣಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಘಟನೆ ಸಂಬಂಧ ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಎರಡು ಗುಂಪುಗಳ ನಡುವೆ ದ್ವೇಷ ಉಂಟುಮಾಡಿದ ಆರೋಪದಡಿ ಮೊದಲ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪುನೀತ್‌ ಕೆರೆಹಳ್ಳಿ, ಗೋಪಿ ಗೌಡ, ವಿನೋದ್‌ ನಾಯಕ್‌ ಸೇರಿದಂತೆ ಮತ್ತಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಮಲ್‌ ಪಾಷಾ, ಅಬೂಬಕರ್‌ ಸಿದ್ದೀಕ್‌ ಹಾಗೂ ಸೈಯದ್‌ ಅನಾಸ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಮೂವರನ್ನೂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಕೆಲವರು ಅಪ್ರಾಪ್ತರು ಎಂಬ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.

ಘಟನೆಯ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ಧರಣಿ ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂರನೇ ಎಫ್‌ಐಆರ್‌ ದಾಖಲಿಸಲಾಗಿದೆ. ಸಾರ್ವಜನಿಕ ರಸ್ತೆ ತಡೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಘಟನಾ ಸ್ಥಳದಲ್ಲಿದ್ದ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ಘಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರು ಕೂಡ ಗಸ್ತು ಹೆಚ್ಚಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

ಈ ನಡುವೆ ಮೂರು ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಗಲಾಟೆಗೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಭಾಗಿಯಾಗಿದ್ದ ಇತರರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...