ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬಳಿಯ ಶಿರೂರಿನಲ್ಲಿ ವಾರದ ಹಿಂದೆ ಗುಡ್ಡ ಕುಸಿದಿದ್ದು, ಕೇರಳದ ಲಾರಿ ಚಾಲಕ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ. ಇನ್ನು, ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕರೆ, ಕಟ್ಟೆ, ನದಿಗಳು ತುಂಬಿ ಹರಿಯುತ್ತಿವೆ.
ಮಹಾರಾಷ್ಟ್ರ-ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿರುವ ಪರಿಣಾಮ, ಘಟಪ್ರಭ, ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ಆರು ಸೇತುವೆಗಳು ನದಿ ನೀಡಿನಲ್ಲಿ ಮುಳುಗಿವೆ.
ಕೃಷ್ಟಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯ ಗೇಟ್‌ಗಳನ್ನು ತೆರೆಯಲಾಗಿದ್ದು, 2.25 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಪರಿಣಾಮ, ಅರಳದಿನ್ನಿ, ಯಲಗೂರು, ಕಾಶಿನಕುಂಟಿ, ಯಲ್ಲಮ್ಮನ ಬೂದಿಹಾಳ, ಮಸೂತಿ ಗ್ರಾಮಗಳಿಗೆ ನೀರು ನುಗ್ಗವ ಆತಂಕ ಎದುರಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 610 ಮನೆಗಳಿಗೆ ಹಾನಿಯಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ತುಂಗಭದ್ರಾ ಹಾಗೂ ವರದಾ ನದಿಗಳ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಎಚ್ಚರಿಕೆ ವಹಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ.
ವಿಜಯನಗರ ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯದ 10 ಕ್ರಸ್ಟ್‌ಗೇಟ್‌ಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಂದೂವರೆ ಅಡಿಯಷ್ಟೇ ಬಾಕಿ ಉಳಿದಿದೆ.
105 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ, 98.06 ಟಿಎಂಸಿ ಅಡಿ ನೀರಿದೆ.
ಮಲೆನಾಡು, ಕರಾವಳಿಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಶರಾವತಿ, ಹೇಮಾವತಿ, ನೇತ್ರಾವತಿ, ಕಾಳಿ, ಸೀತಾ, ಫಲ್ಗುಣಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಹಲವಾರು ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ. ಪ್ರಸ್ತುತ ಜಲಾಶಯಗಳಲ್ಲಿನ ನೀರಿನ ಮಟ್ಟ ಹೀಗಿದೆ;