ರೂಪಾ ಮೌದ್ಗಿಲ್ – ರೋಹಿಣಿ ಸಿಂಧೂರಿ ಪ್ರಕರಣ: ರಾಜಿ ಮಾಡಿಕೊಳ್ಳಲು ನ್ಯಾಯಾಲಯದ ಸಲಹೆ

Date:

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

- Advertisement -

ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ವಿಜಯ್‌ಕುಮಾರ್‌ ಎಸ್‌. ಜಾಟ್ಲಾ ವಿಚಾರಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದೂರುದಾರೆ ರೋಹಿಣಿ ಸಿಂಧೂರಿ ಮತ್ತು ಆರೋಪಿ ರೂಪಾ‌ ಮೌದ್ಗಿಲ್ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರೂಪಾ ಮೌದ್ಗಿಲ್ ಪರ ಹಾಜರಿದ್ದ ವಕೀಲ ಪಿ ಪ್ರಸನ್ನ ಕುಮಾರ್ ಅವರು ಸಾಕ್ಷಿಯ ಪಾಟೀ ಸವಾಲು ನಡೆಸಿದರು.

ವಿಚಾರಣೆ ಆಲಿಸಿದ ಮ್ಯಾಜಿಸ್ಟ್ರೇಟ್‌ “ಇಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳು. ನಿಮ್ಮ ಸಮಯವನ್ನು ಸಮಾಜಕ್ಕಾಗಿ ಮೀಸಲಿಡಬೇಕು. ಹೀಗೆ ನ್ಯಾಯಾಲಯದ ಕಲಾಪದಲ್ಲಿ ವ್ಯಯಿಸುವ ಬದಲು ರಾಜಿಯಾಗಲು ಸಾಧ್ಯವೇ ಯೋಚಿಸಿ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಅಪರಾಧದ ವ್ಯಾಪ್ತಿಗೆ ‘ಶವ ಸಂಭೋಗ’: ಕರ್ನಾಟಕದ ಮನವಿ ತಿರಸ್ಕರಿಸಿದ ಸುಪ್ರೀಂ

ಅಲ್ಲದೇ, “ಒನ್ ಮಿನಿಟ್ ಅಪಾಲಜಿ ಪುಸ್ತಕವನ್ನು ಇಬ್ಬರೂ ಓದಿ” ಎಂದು ಸಲಹೆ ನೀಡಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ, ರೋಹಿಣಿ ಪರ ವಕೀಲರು ಗೌಪ್ಯ ವಿಚಾರಣೆಗೆ ಕೋರಿದರು. ಆ ಮನವಿಯನ್ನು ರೂಪಾ ಪರ ವಕೀಲರು ಆಕ್ಷೇಪಿಸಿದರು. ನಂತರ ಇಬ್ಬರ ಒಪ್ಪಿಗೆ ಮೇರೆಗೆ ಗೌಪ್ಯ ವಿಚಾರಣೆ ನಡೆಸಲಾಯಿತು. ಅದಕ್ಕಾಗಿ ಕೋರ್ಟ್‌ ಹಾಲ್‌ ಒಳಗಿದ್ದ ವಕೀಲರು, ಕೋರ್ಟ್‌ ಸಿಬ್ಬಂದಿ, ಪೊಲೀಸರು, ಇತರೆ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳುಹಿಸಲಾಯಿತು. ವಿಚಾರಣೆಗೆ ಹಾಜರಾಗಿದ್ದ ಸಿಂಧೂರಿ ಪತಿ ಸುಧೀರ್‌ ರೆಡ್ಡಿ ಮತ್ತು ರೂಪಾ ಪತಿ ಮನೀಷ್‌ ಮೌದ್ದಿಲ್‌ ಅವರನ್ನು ಸಹ ಹೊರ ಕಳುಹಿಸಿ ಬಾಗಿಲು ಮುಚ್ಚಲಾಯಿತು. ರೂಪಾ, ರೋಹಿಣಿ ಮತ್ತು ಅವರಿಬ್ಬರ ಪರ ಓರ್ವ ವಕೀಲರಿಗೆ ಮಾತ್ರ ಕೋರ್ಟ್‌ ಒಳಗೆ ಇರಲು ನ್ಯಾಯಾಧೀಶರು ಅನುಮತಿಸಿ, ಪಾಟಿ ಸವಾಲು ಪ್ರಕ್ರಿಯೆ ನಡೆಸಲಾಯಿತು.

ರೂಪಾ ಮೌದ್ಗಿಲ್ 2023ರ ಫೆಬ್ರವರಿ 18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್‌ ಪ್ರಕಟಿಸಿ ತೇಜೋವಧೆ ಮಾಡಿದ್ದಾರೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ನನಗೆ ಮಾನಸಿಕ ಯಾತನೆ ಉಂಟು ಮಾಡಿವೆ. ಆದ್ದರಿಂದ ರೂಪಾ ಅವರಿಂದ ರೂ. ಒಂದು ಕೋಟಿ ಹಣವನ್ನು ಪರಿಹಾರವಾಗಿ ಪಾವತಿಸಲು ನಿರ್ದೇಶಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ 2023ರ ಮಾರ್ಚ್‌ 3ರಂದು, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...