ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಶಾಮನೂರ್‌ಗೆ ತಿರುಗೇಟು ನೀಡಿದ ರಾಯರೆಡ್ಡಿ

Date:

  • ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬುದು ತಪ್ಪು
  • ಬೇಕಾದರೆ ತಮಗೆ ಬೇಕಾದ ಅಧಿಕಾರಿಗಳನ್ನು ಶಾಮನೂರು ಹಾಕಿಕೊಳ್ಳಲಿ

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ತಪ್ಪಿನಿಂದ ಕೂಡಿದೆ ಎಂದು ಸಿದ್ದರಾಮಯ್ಯ ಬಣದ ಶಾಸಕ ಬಸವರಾಜ ರಾಯರೆಡ್ಡಿ ತಿರುಗೇಟು ನೀಡಿದ್ದಾರೆ.

- Advertisement -

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಾತಿ ಆಧಾರದಲ್ಲಿ ಅಧಿಕಾರಿಗಳ ನೇಮಕಾತಿ ನಡೆದರೆ ಅನರ್ಹರು ಮೇಲೆ ಬಂದು ಕೂರುತ್ತಾರೆ. ಜಾತಿ ಆಧಾರದಲ್ಲಿ ಪೋಸ್ಟಿಂಗ್ ಕೊಡಲು ಆಗಲ್ಲ. ಆದರೆ ಮಂತ್ರಿ ಮಾಡುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಕೊಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ ರಾಯರೆಡ್ಡಿ, ಸಿದ್ದರಾಮಯ್ಯ ಅವರು ಲಿಂಗಾಯತ ವಿರೋಧಿ ಅಲ್ಲ. ಮೂವರು ಡಿಸಿಗಳು, ಏಳು ಎಸ್ಪಿಗಳು, ನಾಲ್ಕು ಸಿಇಒ, 13 ಉಪಕುಲಪತಿಗಳು, ಏಳು ಮಂತ್ರಿಗಳು ಲಿಂಗಾಯತರಿದ್ದಾರೆ” ಎಂದು ತಿಳಿಸಿದರು.

“ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಅಲ್ಲ, ಸಿದ್ದರಾಮಯ್ಯ ಬಡವರ ಪರ, ಶೋಷಣೆಗೆ ಒಳಪಟ್ಟ ಸಮುದಾಯಗಳ ಪರ ಇದ್ದಾರೆ. ಲಿಂಗಾಯತರು ಶೋಷಿತರ ಮನೆಗೆ ಹೋಗಲ್ಲ ನಮ್ಮ ಕಡೆ ಈ ವ್ಯವಸ್ಥೆ ಇದೆ” ಎಂದರು.

ಬೇಕಾದ ಅಧಿಕಾರಿಗಳನ್ನು ಹಾಕಿಕೊಳ್ಳಿ

“ಶಾಮನೂರು ಅವರು ತಪ್ಪು ಮಾಹಿತಿ ಇಟ್ಟುಕೊಂಡು ಮಾತನಾಡಬಾರದು. ಬೇಕಾದರೆ ತಮಗೆ ಬೇಕಾದ ಅಧಿಕಾರಿಗಳನ್ನು ಶಾಮನೂರು ಅವರು ಹಾಕಿಕೊಳ್ಳಲಿ. ಮಾಹಿತಿ ಕೊರತೆಯಿಂದ ಮಾತನಾಡುವುದು ತಪ್ಪು” ಎಂದು ಹೇಳಿದರು.

“ಅಧಿಕಾರಿಗಳ ಬಗ್ಗೆ ಜಾತಿ ಆಧಾರದಲ್ಲಿ ಮಾತನಾಡುವುದೇ ತಪ್ಪು. ಸಾಕಷ್ಟು ಮುಖ್ಯ ಇಂಜಿನಿಯರ್ ಪೋಸ್ಟ್‌ನಲ್ಲಿ ಲಿಂಗಾಯತರಿದ್ದಾರೆ. ಹೀಗೆ ಆದರೆ ನಾಳೆ ಒಕ್ಕಲಿಗರು, ಕುರುಬರು ಮಾತನಾಡುತ್ತಾರೆ. ಹೀಗಾದರೆ ಆಡಳಿತ ನಡೆಸುವುದು ಹೇಗೆ? ಶಾಮನೂರು ಹೇಳಿಕೆ ಪರಿಣಾಮ ಆಡಳಿತದ ಮೇಲೆ ಬೀರುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

“ದಾವಣಗೆರೆಯಲ್ಲಿ ಜಿಪಂ ಸಿಇಒ ಲಿಂಗಾಯತ ಸಮುದಾಯದವರೇ ಆಗಿದ್ದಾರೆ. ಶಾಮನೂರು ಜಾತಿ ವಿಚಾರ ಮಾತನಾಡಿದ್ದು ತಪ್ಪು. ಅವರದ್ದು ಡ್ಯುಯೆಲ್ ರೋಲ್, ನಾನಂತೂ ಎಂದೂ ಜಾತಿ ಆಧಾರದ ಮೇಲೆ ಮಂತ್ರಿ ಮಾಡಿ ಅಂತ ಕೇಳಲ್ಲ. ಅನರ್ಹರೆಲ್ಲ ನಾಳೆ ಜಾತಿ ಆಧರಿಸಿ ಬಂದು ಕೂರುತ್ತಾರೆ. ಯಾವುದೇ ಸಮುದಾಯದವರೂ ಹೀಗೆ ಮಾತನಾಡಬಾರದು ಅಂತ ಬಯಸುತ್ತೇನೆ” ಎಂದು ಹೇಳಿದರು.

“ನಾನು ಸಿದ್ದರಾಮಯ್ಯ ಪರ ವಕಾಲತ್ತು ವಹಿಸುತ್ತಿಲ್ಲ. ನನ್ನನ್ನ ಸಚಿವರನ್ನಾಗಿ ಮಾಡಿ, ಏನಾದರೂ ಮಾಡಿ ಅಂತಾ ಭಿಕ್ಷೆ ಬೇಡಲ್ಲ. ನಾನು ಭಿಕ್ಷೆ ಬೇಡಲ್ಲ ಜಾತಿ ಆಧಾರದ ಮೇಲೆ ಅಧಿಕಾರಿಗಳ ವರ್ಗಾವಣೆ ಬೇಡ, ಆಡಳಿತ ಕುಸಿಯುತ್ತದೆ” ಎಂದರು.

ಮಹತ್ವ ಕಳೆದುಕೊಂಡ ಡಿಸಿಎಂ ಪೋಸ್ಟ್

ಡಿಸಿಎಂ ಸ್ಥಾನ ಬಗ್ಗೆ ಪ್ರತಿಕ್ರಿಯಿಸಿದ ರಾಯರೆಡ್ಡಿ, “ಡಿಸಿಎಂ ಸ್ಥಾನ ಅದರ ಮಹತ್ವವನ್ನು ಕಳೆದುಕೊಂಡಿದೆ. ಐದು, ಆರು ಜನ ಡಿಸಿಎಂ ಮಾಡಿದರೆ ಹೇಗೆ? ಆಡಳಿತ ದೃಷ್ಟಿಯಿಂದ ಪ್ರಯೋಜನ ಇಲ್ಲ, ರಾಜಕೀಯ ದೃಷ್ಟಿಯಿಂದ ಬೇಕಾದರೆ ಮಾಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...