ಮಂಗಳೂರಿನಲ್ಲಿ ನಡೆದ ಒಂದು ದಿನದ ಸಂಪುಟ ಸಭೆಗೆ 3.83 ಕೋಟಿ ರೂ. ಖರ್ಚು!

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ನಡೆದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಗೆ ರಾಜ್ಯ ಸರ್ಕಾರ ಬರೋಬ್ಬರಿ 3.83 ಕೋಟಿ ರೂ. ಖರ್ಚು ಮಾಡಿದೆ. ಸಭೆಯ ಪೂರ್ವಸಿದ್ಧತೆ ಮತ್ತು ವ್ಯವಸ್ಥೆಗಾಗಿ ಮಂಜೂರು ಮಾಡಿದ್ದ ಈ ಹಣಕ್ಕೆ ಸಾಮಾನ್ಯ ಟೆಂಡರ್ ನಿಯಮಗಳಿಂದಲೂ ವಿನಾಯಿತಿ ನೀಡಲಾಗಿದೆ. ಭಾರೀ ಮೊತ್ತದ ಖರ್ಚು ಮತ್ತು ವಿನಾಯಿತಿ ಸಂಗತಿಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

- Advertisement -

ಸೆಪ್ಟೆಂಬರ್ 17ರಂದು ರಾಜ್ಯ ಹಣಕಾಸು ಇಲಾಖೆಯ ವೆಚ್ಚ ಕೋಶ ಹೊರಡಿಸಿರುವ ಆದೇಶದ ಪ್ರಕಾರ, ಒಂದೇ ದಿನದ ಸಭೆಯ ವ್ಯವಸ್ಥೆಗಳಿಗಾಗಿ 3,83,26,700 ರೂ. (ಜಿಎಸ್‌ಟಿ ಹೊರತುಪಡಿಸಿ) ಅನುದಾನ ಮಂಜೂರು ಮಾಡಲಾಗಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಹಣಕಾಸು ಇಲಾಖೆಯ ಆದೇಶದಂತೆ ಈ ಹಣವನ್ನು ಸಭೆಗೆ ಸಂಬಂಧಿಸಿದ ಸಿವಿಲ್ ಕಾಮಗಾರಿಗಳು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳಿಗೆ ಆತಿಥ್ಯ, ಇಂಧನ, ಹೆಚ್ಚುವರಿ ವಾಹನಗಳ ಬಾಡಿಗೆ, ಸಾರಿಗೆ ವ್ಯವಸ್ಥೆ ಹಾಗೂ ವೇದಿಕೆ ನಿರ್ವಹಣೆಗಾಗಿ ಮಂಜೂರು ಮಾಡಲಾಗಿದೆ. ಈ ಎಲ್ಲ ಕಾಮಗಾರಿಗಳ ಅನುಷ್ಠಾನ ಮತ್ತು ಸಮನ್ವಯದ ಜವಾಬ್ದಾರಿಯನ್ನು ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು.

ಸಭೆಯ ವ್ಯವಸ್ಥೆಗಳಿಗೆ ಸಂಬಂಧಿಸಿದ ಖರೀದಿ ಪ್ರಕ್ರಿಯೆಗೆ ‘ಕರ್ನಾಟಕ ಪಾರದರ್ಶಕ ಸಾರ್ವಜನಿಕ ಸಂಗ್ರಹಣೆಗಳ ಕಾಯ್ದೆ–1999’ರ (KTPP Act) ಸೆಕ್ಷನ್ 4(ಜಿ) ಅಡಿಯಲ್ಲಿ ಸರ್ಕಾರ ವಿನಾಯಿತಿ ನೀಡಿದೆ. ಈ ನಿಯಮದಡಿ ಸರ್ಕಾರವು ವಿಶೇಷ ಸಂದರ್ಭಗಳಲ್ಲಿ ಅಧಿಸೂಚನೆಯ ಮೂಲಕ ಸಾಮಾನ್ಯ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡಲು ಅವಕಾಶವಿದೆ. ಆದಾಗ್ಯೂ, ವಿನಾಯಿತಿ ನೀಡಿದ್ದರೂ ಸಮಂಜಸ ದರದಲ್ಲಿ ಗುಣಮಟ್ಟದ ಸೇವೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಹಣಕಾಸು ಇಲಾಖೆಯು ಕಂದಾಯ ಇಲಾಖೆಗೆ ಸೂಚಿಸಿದೆ.

ಮಂಜೂರಾಗಿರುವ 3.83 ಕೋಟಿ ರೂ. ಹಣದಲ್ಲಿ ವಾಹನ ಬಾಡಿಗೆ, ಇಂಧನ, ಆತಿಥ್ಯ ಮತ್ತು ವೇದಿಕೆ ನಿರ್ವಹಣೆಗೆ ಪ್ರತ್ಯೇಕವಾಗಿ ಎಷ್ಟು ವೆಚ್ಚವಾಗಿದೆ ಹಾಗೂ ಅಂತಿಮವಾಗಿ ಎಷ್ಟು ಹಣ ಪಾವತಿಸಲಾಗಿದೆ ಎಂಬ ದಾಖಲೆಗಳು ಇನ್ನೂ ಬಹಿರಂಗವಾಗಿಲ್ಲ.

ಅಂದಹಾಗೆ, ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ಆಯೋಜಿಸಲಾಗಿತ್ತು. ಕರಾವಳಿ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವ ಪಡೆದಿದ್ದ ಈ ಸಭೆಯಲ್ಲಿ ಸುಮಾರು 32,611 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು. ತುಳು ಭಾಷೆಗೆ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ: ಸುರೇಖಾ

ಬಿರ್ಸಾ ಮುಂಡಾ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ. ಅವರು ಸಾಮಾಜಿಕ ಪರಿವರ್ತನೆಯ...

ವಿಜಯಪುರ | ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ಭಾನುವಾರ ಜಿಲ್ಲೆಯಲ್ಲಿ ನಡೆದ ಗೆಜೆಟೆಡ್...

ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...