ಆರ್‌ಎಸ್‌ಎಸ್ ವಿರುದ್ಧ ಪೋಸ್ಟ್ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಜಾಮೀನು ಮಂಜೂರು

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕುರಿತು ವಿವಾದಾತ್ಮಕ ಪೋಸ್ಟ್ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ, ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

- Advertisement -

​ಶನಿವಾರ ಪ್ರಕರಣದ ವಿಚಾರಣೆ ನಡೆಸಿದ ನಗರದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಉಭಯ ನಾಯಕರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ತಲಾ 10 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್ (ಶ್ಯೂರಿಟಿ) ಒದಗಿಸುವಂತೆ ನ್ಯಾಯಾಧೀಶರು ಆದೇಶದಲ್ಲಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆರ್‌ಎಸ್‌ಎಸ್ ಸಂಘಟನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ಹಾಗೂ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ತೇಜಸ್ ಗೌಡ ಎಂಬುವವರು ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ನ್ಯಾಯಾಲಯವು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್‌ಗೆ ಸಮನ್ಸ್ ಜಾರಿಗೊಳಿಸಿತ್ತು.

​ಈ ಹಿಂದಿನ ವಿಚಾರಣೆಗಳ ವೇಳೆ ಇಬ್ಬರೂ ನಾಯಕರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ಪಡೆದುಕೊಂಡಿದ್ದರು. ಕಳೆದ ಬಾರಿ ವಿಚಾರಣೆ ನಡೆದಾಗ ಕಡ್ಡಾಯವಾಗಿ ಖುದ್ದು ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು. ಇದೇ ಸಂದರ್ಭದಲ್ಲಿ ಸದಾಶಿವನಗರ ಮತ್ತು ಅಶೋಕ ನಗರ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಆದರೆ, ಪೊಲೀಸರು ನೀಡಿದ ವರದಿಯು ತೃಪ್ತಿದಾಯಕವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಧೀಶರು, ಆರೋಪಿಗಳು ಖುದ್ದು ಹಾಜರಾಗಲೇಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿ ಸಮನ್ಸ್ ಜಾರಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...