‘ಸಂವಿಧಾನ’ದ ಜಾಗದಲ್ಲಿ ‘ಮನುಸ್ಮೃತಿ’ ಎಂದು ಹೇಳದ ಹೇಡಿಗಳು ಆರ್‌ಎಸ್‌ಎಸ್‌ನವರು: ಬಿ ಕೆ ಹರಿಪ್ರಸಾದ್

Date:

Advertisements

ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುವ ಈ ಸಂವಿಧಾನ ವಿರೋಧಿಗಳು ಸಂವಿಧಾನಕ್ಕೆ ಪರ್ಯಾಯವಾಗಿ ಯಾವ ಸಿದ್ದಾಂತ ಅಳವಡಿಸಿಕೊಳ್ಳುತ್ತೇವೆ ಎಂದು ಹೇಳುವ ಧೈರ್ಯವಿಲ್ಲ. ಕನಿಷ್ಟ ಪಕ್ಷ ಸಂವಿಧಾನಕ್ಕೆ ಬದಲಾಗಿ ತಮ್ಮ ಮೂಲ ಸಿದ್ದಾಂತವಾದ ಮನುಸ್ಮೃತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳುವ ಧೈರ್ಯವೂ ಇಲ್ಲದ ಹೇಡಿಗಳು ಎಂದು ಧಾನ ಪರಿಷತ್‌ ಸದಸ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್‌ ಸವಾಲು ಮುಂದಿಟ್ಟಿದ್ದಾರೆ ಟೀಕಿಸಿದ್ದಾರೆ.

ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದಿ’ ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಲು ಆಗ್ರಹಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸವಾಲು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯವರ ಈ ಬದಲಾವಣೆ ಹೇಳಿಕೆಗೂ ನನ್ನ ಸವಾಲಿದೆ. ಜಾತ್ಯಾತೀತ ಹಾಗೂ ಸಮಾಜವಾದಿ ಪದಗಳನ್ನು ಬದಲಾಯಿಸಿದರೆ ಅದರ ಜಾಗದಲ್ಲಿ ಯಾವುದನ್ನು ಸೇರಿಸುತ್ತೀರಿ ಎಂದು ಬಹಿರಂಗವಾಗಿ ಹೇಳುವ ಧೈರ್ಯ ಇದೆಯಾ? ಸಮಾಜವಾದಿ ಜಾಗದಲ್ಲಿ ಬಂಡವಾಳವಾದವನ್ನು, ಜಾತ್ಯಾತೀತ ಜಾಗದಲ್ಲಿ ಜಾತಿಶ್ರೆಷ್ಠವಾದವನ್ನು ಸೇರಿಸುತ್ತೇವೆ ಎಂದು ಹೇಳುವ ಧೈರ್ಯ ಇದೆಯಾ” ಎಂದು ಪ್ರಶ್ನಿಸಿದ್ದಾರೆ.

Advertisements

“ಸಂವಿಧಾನವನ್ನು ಮುಟ್ಟಿದರೆ ರಕ್ತಕ್ರಾಂತಿಗೂ ಸರಿ, ಸಂವಿಧಾನವನ್ನು ಉಳಿಸುವ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಕಾಂಗ್ರೆಸ್ ಪಕ್ಷ ಅಂತಹ ಯಾವ ಬೆಲೆ ತೆತ್ತಾದರೂ ಸರಿ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲು ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

“ಸಂವಿಧಾನದ ಪ್ರಸ್ತಾವನೆಯ “ಜೀವಾಳ” ಹಾಗೂ “ಹೃದಯವೇ” ಆಗಿರುವ ಜಾತ್ಯಾತೀತ ಹಾಗೂ ಸಮಾಜವಾದಿ ಪದಗಳನ್ನು ತೆಗೆದು ಹಾಕಬೇಕೆಂದು ಆರ್ ಎಸ್ ಎಸ್ ಮತ್ತೆ ಒತ್ತಾಯಿಸಿದೆ. ಸಂಘಪರಿವಾರದ ಗುರುಗಳಾದ ಗೋಲ್ವಾಲ್ಕರ್, ಹೆಡ್ಗೆವಾರ್, ಸಾವರ್ಕರ್, ಇಂದ ಹಿಡಿದು ಈಗಿನ ಹೊಸಬಾಳೆ,ರಸಬಾಳೆವರೆಗೂ ಸಂವಿಧಾನವನ್ನು ವಿರೋಧಿಸುತ್ತಲೇ ಬಂದಿದ್ದಾರೆ” ಎಂದಿದ್ದಾರೆ.

“ಸಂವಿಧಾನವನ್ನೆ ಬದಲಾಯಿಸುತ್ತೇವೆ”, “ನಮ್ಮನ್ನ ಗೌರವಿಸುವ ಸಂವಿಧಾನ ಬೇಕು”, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು”, “ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನ ಬಿಜೆಪಿ ಪಡೆದರೆ ಸಂವಿಧಾನ ಬದಲಾಯಿಸುವುದೇ ನಮ್ಮ ಗುರಿ” ಎಂದು ಸಂವಿಧಾನ ವಿರೋಧಿ ನಿಲುವುಗಳನ್ನು ವ್ಯಕ್ತಪಡಿಸಿದ್ದ ಬಿಜೆಪಿಯ ಮನಸ್ಥಿತಿಗಳ ಹಿಂದೆ ಸಂಘ ಪರಿವಾರ ಇರುವುದು ಸ್ಪಷ್ಟ ಎಂದು ಕಿಡಿಕಾರಿದ್ದಾರೆ.

“ನೆಹರೂ ಅವರು ಸಂವಿಧಾನವನ್ನು ರಚಿಸಲು ಬಾಬಾ ಸಾಹೇಬರಿಗೆ ಅವಕಾಶ ನೀಡಿದ ಕ್ಷಣದಿಂದ ಹಿಡಿದು ಈ ಕ್ಷಣದವರೆಗೂ ಸಂವಿಧಾನವನ್ನು ಸಂಘಪರಿವಾರ ಎಂದೂ ಒಪ್ಪಿಕೊಳ್ಳಲೇ ಇಲ್ಲ. ಅದಕ್ಕೆ ಇತಿಹಾಸವೇ ಸಾಕ್ಷಿ. ಸ್ವಾತಂತ್ರ್ಯ ಚಳುವಳಿಯಲ್ಲಿ ಎಂದೂ ಭಾಗವಹಿಸದೆ, ಸ್ವಾತಂತ್ರ್ಯ ಸಂಗ್ರಾಮದ ವಿರುದ್ಧ ಪಿತೂರಿ ನಡೆಸುತ್ತಿದ್ದ ಸಂಘ ಪರಿವಾರ ದೇಶದ ಜನರೆದುರು ಕ್ಷಮೆ ಕೇಳುವ ನೈತಿಕತೆಯನ್ನು ಕಳೆದುಕೊಂಡಿದೆ. ನಮ್ಮ ಪೂರ್ವಜರ ತ್ಯಾಗ ಬಲಿದಾನದಿಂದ ಈ ದೇಶಕ್ಕೆ ನೀಡಿದ ಸ್ವಾತಂತ್ರ್ಯ ಹಾಗೂ ಸಂವಿಧಾನದ ಬಗ್ಗೆ ಮಾತುಡುವ ಯಾವ ಹಕ್ಕು ಸಂಘಪರಿವಾರಕ್ಕಿಲ್ಲ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X