ಮೈಸೂರಿನ ಮುಕ್ತ ವಿವಿಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮ: ಮುಂದೂಡಲು ಸರ್ಕಾರ ನೋಟಿಸ್

Date:

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (KSOU) ಮಾರ್ಚ್ 25 ರಿಂದ 27ರವರೆಗೆ ಆಯೋಜನೆಗೊಂಡಿದ್ದ ಆರ್‌ಎಸ್‌ಎಸ್‌ ಸಂಬಂಧಿತ ‘ಏಕಾತ್ಮ ಮಾನವ ದರ್ಶನ – ಭಾರತದ ವಿಶ್ವದೃಷ್ಟಿ’ ಕುರಿತ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿದ ಬೆನ್ನಲ್ಲೇ, ಕಾರ್ಯಕ್ರಮವನ್ನು ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಕ್ಕೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ.

- Advertisement -

​ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿದ ವಿವಾದ
ಮಾರ್ಚ್ 23ರಂದು ವಿಧಾನ ಪರಿಷತ್‌ನ ಕಲಾಪದಲ್ಲಿ ‘ಶೂನ್ಯ ವೇಳೆ’ಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಶಾಸಕ ರಮೇಶ್ ಬಾಬು ಅವರು, “ರಾಜ್ಯ ಸರ್ಕಾರದ ಗಮನಕ್ಕೆ ತಾರದೆ, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರನ್ನು ಆಹ್ವಾನಿಸದೆ ಮುಕ್ತ ವಿವಿಯು ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮವೊಂದನ್ನು ಆಯೋಜಿಸುತ್ತಿದೆ” ಎಂದು ಸರ್ಕಾರದ ಗಮನಕ್ಕೆ ತಂದಿದ್ದರು. ಪ್ರಜ್ಞಾ ಪ್ರವಾಹ ಹಾಗೂ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ವಿವಿಯು ಸರ್ಕಾರದ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

​ಸರ್ಕಾರದಿಂದ ನೋಟಿಸ್‌
ವಿಧಾನ ಪರಿಷತ್‌ನಲ್ಲಿ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಗಂಭೀರವಾಗಿ ಪರಿಗಣಿಸಿದ ಉನ್ನತ ಶಿಕ್ಷಣ ಇಲಾಖೆಯ (ವಿಶ್ವವಿದ್ಯಾಲಯಗಳು) ಸರ್ಕಾರದ ಉಪ ಕಾರ್ಯದರ್ಶಿ ಎನ್. ಕುಮಾರ್ ಅವರು ಮುಕ್ತ ವಿವಿ ಕುಲಪತಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? 48 ಗಂಟೆಗಳ ಹಿಂದಿನ ಆ ಫೋನ್ ಕರೆ ಖಮೇನಿ ಹತ್ಯೆಗೆ ಮುನ್ನುಡಿ ಬರೆದಿದ್ದೇಗೆ?

​”ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ವಿವಿಯ ಲೋಗೋ ಬಳಸಲಾಗಿದೆ ಹಾಗೂ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ವಿವಿಯೇ ಭರಿಸುತ್ತಿದೆ ಎಂದು ತಿಳಿದುಬಂದಿದೆ. ವಿವಿಯು ಆಂತರಿಕ ಸಂಪನ್ಮೂಲದ ಕೊರತೆ ಎದುರಿಸುತ್ತಿರುವಾಗ ಇಂತಹ ಖಾಸಗಿ ಕಾರ್ಯಕ್ರಮಗಳಿಗೆ ವಿವಿಯ ಹಣ ಬಳಕೆ ಸೂಕ್ತವಲ್ಲ. ಅಲ್ಲದೆ, ಘನತೆವೆತ್ತ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಇಲಾಖಾ ಸಚಿವರನ್ನು ಆಹ್ವಾನಿಸದಿರುವುದು ನಿಯಮಗಳ ಸ್ಪಷ್ಟ ಉಲ್ಲಂಘನೆ” ಎಂದು ನೋಟಿಸ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ.

​ಜೊತೆಗೆ, ಪ್ರಸ್ತುತ ಕಾರ್ಯಕ್ರಮದ ವಿಷಯವು ಕೆಎಸ್‌ಒಯು ಕಾಯ್ದೆ-1992ರ ಉದ್ದೇಶಗಳಿಗೆ ಸಂಬಂಧಪಡದ ಕಾರಣ, ಸಮ್ಮೇಳನವನ್ನು ಕೂಡಲೇ ಮುಂದೂಡುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

​ಆರೋಪ ನಿರಾಕರಿಸಿದ ಕುಲಪತಿ
ಸರ್ಕಾರದ ನೋಟಿಸ್‌ಗೆ ಮಾರ್ಚ್ 24ರಂದು ಸುದೀರ್ಘ ಲಿಖಿತ ಪ್ರತಿಕ್ರಿಯೆ ನೀಡಿರುವ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ.

​”ವಿವಿಯ ಘಟಿಕೋತ್ಸವ ಭವನವನ್ನು ‘ಪ್ರಜ್ಞಾ ಪ್ರವಾಹ’ ಸಂಸ್ಥೆಯ ವಿನಂತಿಯ ಮೇರೆಗೆ ಕೇವಲ ಬಾಡಿಗೆ ಆಧಾರದ ಮೇಲೆ ನೀಡಲಾಗಿದೆ. ಸಂಸ್ಥೆಯು ವಿವಿಗೆ ನಿಗದಿತ ಬಾಡಿಗೆಯನ್ನೂ ಪಾವತಿಸಿದೆ. ಈ ಸಮ್ಮೇಳನವು ವಿವಿಯ ಅಧಿಕೃತ ಕಾರ್ಯಕ್ರಮವಲ್ಲ. ಅತಿಥಿಗಳ ಆಯ್ಕೆ, ಆಹ್ವಾನ ಪತ್ರಿಕೆ ಮುದ್ರಣ ಎಲ್ಲವನ್ನೂ ಆಯೋಜಕ ಸಂಸ್ಥೆಯೇ ಮಾಡಿದ್ದು, ಇದರಲ್ಲಿ ವಿವಿಯ ಯಾವುದೇ ಪಾತ್ರವಿಲ್ಲ” ಎಂದು ಶರಣಪ್ಪ ವಿ. ಹಲಸೆ ಅವರು ತಿಳಿಸಿದ್ದಾರೆ.

​”ಸಮ್ಮೇಳನದ ವಿಷಯವು ಶೈಕ್ಷಣಿಕವಾಗಿರುವುದರಿಂದ, ಮುಕ್ತ ವಿವಿಯ ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಅನುಕೂಲವಾಗಲಿ ಎಂಬ ಏಕೈಕ ಉದ್ದೇಶದಿಂದ ಆಹ್ವಾನ ಪತ್ರಿಕೆಯಲ್ಲಿ ಲೋಗೋ ಬಳಸಲು ಆಯೋಜಕರು ಅನುಮತಿ ಪಡೆದಿದ್ದರು. ವಿವಿಯಿಂದ ಯಾವುದೇ ರೀತಿಯ ಆರ್ಥಿಕ ನೆರವು ನೀಡಿಲ್ಲ. ಇನ್ನು, ಆಯೋಜಕ ಸಂಸ್ಥೆಯೇ ರಾಜ್ಯಪಾಲರನ್ನು ಆಹ್ವಾನಿಸಿದ್ದು, ವಿವಿಯೇ ಈ ಕಾರ್ಯಕ್ರಮದ ಆಯೋಜಕರಲ್ಲದ ಕಾರಣ ಶಿಷ್ಟಾಚಾರ ಪಾಲನೆಯ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...