ಆರೆಸ್ಸೆಸ್ ದೊಣ್ಣೆ ಹಿಡಿದು ಪಥಸಂಚಲನ ನಡೆಸಲು ಅನುಮತಿ ಕೂಡದು- ದಸಂಸ ಒಕ್ಕೂಟದ ಆಗ್ರಹ

Date:

ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಆರ್‌ಎಸ್ಎಸ್‌ಗೆ ಅನುಮತಿ ನೀಡಕೂಡದು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

- Advertisement -

ಆರ್.ಎಸ್.ಎಸ್. ಮೆರವಣಿಗೆ ಮಾಡಲು ಬಯಸಿದರೆ ಅದಕ್ಕೆ ನಮ್ಮ ಆಕ್ಷೇಪಣೆ – ತಕರಾರು ಇಲ್ಲ. ಆದರೆ, ಮಾರಕಾಸ್ತ್ರಗಳಲ್ಲಿ ಒಂದಾದ ದೊಣ್ಣೆ ಹಿಡಿದು ಮೆರವಣಿಗೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲದೆ ಇರುವುದರಿಂದ ಈ ಸಂವಿಧಾನ ವಿರೋಧಿ ನಡೆಗೆ ತನ್ನ ತೀವ್ರ ವಿರೋಧ ಇದೆಯೆಂದು ಒಕ್ಕೂಟ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ರಾಜ್ಯ ಸಂಘಟನಾ ಸಂಚಾಲಕ ಇಂದೂಧರ ಹೊನ್ನಾಪುರ, ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ವಿ.ನಾಗರಾಜು, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎನ್.ಮುನಿಸ್ವಾಮಿ ಹಾಗೂ ಎನ್ ವೆಂಕಟೇಶ್ ಅವರು ಈ ಹೇಳಿಕೆ ನೀಡಿದ್ದಾರೆ.

“ವಾಸ್ತವವಾಗಿ ಪಥಸಂಚಲನ ಮಾಡುವ ಅಧಿಕಾರ ಸಾಂವಿಧಾನಿಕವಾಗಿ ಇರುವುದು ಪೊಲೀಸ್ ಮತ್ತು ಇನ್ನಿತರ ರಕ್ಷಣಾ ಪಡೆಗಳಿಗೆ ಮಾತ್ರ. ಆರ್.ಎಸ್.ಎಸ್. ಸೇರಿದಂತೆ ಇತರ ಯಾವುದೇ ಸಂಘ ಸಂಸ್ಥೆಗಳು ಮೆರವಣಿಗೆ-ಪ್ರತಿಭಟನೆ ಮಾಡಬಹುದೇ ಹೊರತು ‘ಪಥಸಂಚಲನ’ವನ್ನಲ್ಲ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಹಾಗೂ ಜಾತ್ಯತೀತತೆಯನ್ನು ಒಪ್ಪದ ಆರ್.ಎಸ್.ಎಸ್. ಒಂದೇ ಧರ್ಮದ ಚೌಕಟ್ಟಿನೊಳಗೆ ದೇಶ ಕಟ್ಟುವ ಮಾತನಾಡುತ್ತಿದೆ. ಸಮತೆ ಮಮತೆ ಅಂತಃಕರಣ ಮಾನವೀಯತೆ ಮತ್ತು ಕೋಮು ಸಾಮರಸ್ಯದಂತಹ ಗುಣಗಳನ್ನು ಎಂದಿಗೂ ಮೈಗೂಡಿಸಿಕೊಳ್ಳದ ಆರ್.ಎಸ್.ಎಸ್. ಸ್ಪೃಶ್ಯ-ಅಸ್ಪೃಶ್ಯ, ಮಡಿ-ಮೈಲಿಗೆ, ಲಿಂಗ ತಾರತಮ್ಯದಂತಹ ಅಸಮಾನತೆಯನ್ನು ಬೆಂಬಲಿಸುತ್ತಿದೆ. ರಾಜ್ಯಾಂಗದ ಬದಲಿಗೆ ಪಂಚಾಂಗದ ಮೂಲಕ ಆಡಳಿತ ನಡೆಸಲು ಹವಣಿಸುತ್ತಿದೆ. ಈ ಅನಾಗರಿಕ ಪ್ರವೃತ್ತಿಯನ್ನು ನಾಗರಿಕ ಸಮಾಜವು ಖಂಡಿಸಬೇಕು ಮತ್ತು ಅದರ ವಿರುದ್ಧ ದನಿ ಎತ್ತಬೇಕು ಎಂದು ಒಕ್ಕೂಟ ಕರೆ ನೀಡಿದೆ.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ ಹಾಗೂ ಸಂವಿಧಾನವನ್ನು ಒಪ್ಪದ ಆರ್.ಎಸ್.ಎಸ್. ಹಿಂದುತ್ವದ ಹೆಸರಿನಲ್ಲಿ ಬ್ರಾಹ್ಮಣ್ಯದ ಪಾರಮ್ಯವನ್ನು ಜನಸಾಮಾನ್ಯರ ಮೇಲೆ ಹೇರುತ್ತಿದ್ದು, ಜನರ ಮನಸ್ಸಿನಲ್ಲಿ ಜಾತೀಯತೆ-ಮತೀಯತೆ, ಮೌಢ್ಯ, ಮೂಢನಂಬಿಕೆಗಳ ವಿಷಬೀಜ ಬಿತ್ತುತ್ತಿದೆ. ಆರ್.ಎಸ್.ಎಸ್. ವರಿಷ್ಠ ಮೋಹನ್ ಭಾಗವತ್ ಅವರಿಂದ ತಳಹಂತದ ಎಲ್ಲ ಪದಾಧಿಕಾರಿಗಳವರೆಗೂ ಬ್ರಾಹ್ಮಣರದ್ದೇ ಪಾರುಪತ್ಯ ಮಾಡಿಕೊಂಡು, ಬಜರಂಗದಳ, ಶ್ರೀರಾಮ ಸೇನೆ, ವಿಶ್ವಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಿಂದುತ್ವದ ಹೆಸರಿನಲ್ಲಿ ಶೂದ್ರ ಸಮುದಾಯಗಳ ಯುವಕರಿಗೆ ದೊಣ್ಣೆ, ತಲವಾರ್, ತ್ರಿಶೂಲ ಸೇರಿದಂತೆ ಮಾರಕಾಸ್ತ್ರಗಳನ್ನು ನೀಡಿ ಕೋಮು ಹಿಂಸಾ ಕೃತ್ಯಗಳಿಗೆ ಪ್ರೇರೇಪಿಸುತ್ತ ಅವರನ್ನು ತನ್ನ ಕಾಲಾಳುಗಳನ್ನಾಗಿ ಮಾಡಿಕೊಳ್ಳುತ್ತಿದೆ.

ಪ್ರಿಯಾಂಕ ಖರ್ಗೆ ಹೋರಾಟಕ್ಕೆ ಬೆಂಬಲ

ದೇಶದ ಯಾವುದೇ ಕಾನೂನಿನ ಅನ್ವಯ ನೋಂದಣಿ ಆಗದೆ ಇರುವ ಆರ್.ಎಸ್.ಎಸ್. ಸರ್ಕಾರಿ-ಅನುದಾನಿತ ಶಾಲಾ-ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರವಾದ ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ, ದೇಶವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಪ್ರತಿರೋಧ ವ್ಯಕ್ತಪಡಿಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರಂಭಿಸಿರುವ ‘ಸೈದ್ಧಾಂತಿಕ ಹೋರಾಟ’ಕ್ಕೆ ಒಕ್ಕೂಟ ತನ್ನ ಬೆಂಬಲ ಸಾರಿದೆ.

ಪ್ರಿಯಾಂಕ ಖರ್ಗೆ ಅವರು ಎತ್ತಿರುವ ಸೈದ್ಧಾಂತಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಹತಾಶೆಯಲ್ಲಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯು ಖರ್ಗೆ ಮತ್ತು ಅವರ ಕುಟುಂಬದ ಮೇಲೆ ವೈಯಕ್ತಿಕವಾಗಿ ಕ್ಷುಲ್ಲಕ ದಾಳಿ ನಡೆಸುತ್ತ, ದ್ವೇಷ ಕಾರುತ್ತಿರುವುದನ್ನು ಹಾಗೂ ‘ಪ್ರಿಯಾಂಕ ಖರ್ಗೆ ಅವರ ಮನೆಗೇ ನುಗ್ಗುತ್ತೇವೆ ‘ಎಂದು ಬೆದರಿಕೆ ಹಾಕಿರುವ ಬಿಜೆಪಿ ಮುಖಂಡ ಮಣಿಕಾಂತ ರಾಥೋಡ್ ಅವರ ಗೂಂಡಾಗಿರಿ ನಡೆಯನ್ನು ಒಕ್ಕೂಟವು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...