ರಾಷ್ಟ್ರಧ್ವಜಕ್ಕೆ ಆರ್‌ಎಸ್‌ಎಸ್ ಅಗೌರವ ತೋರಿ 100 ವರ್ಷ: ಸಚಿವ ಪ್ರಿಯಾಂಕ್ ಖರ್ಗೆ ದಾಖಲೆ ಬಿಡುಗಡೆ

Date:

ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಸೋಮವಾರ) ದಾಖಲೆ ಸಮೇತ ಆರೋಪ ಮಾಡಿದ್ದಾರೆ.

- Advertisement -

ಈ ಸಂಬಂಧ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್, ‘1948ರ ಫೆಬ್ರುವರಿ 24ರಂದು ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಹೇಗೆ ಅವಮಾನಿಸಿತ್ತು ಎಂಬುದನ್ನು ತೋರಿಸುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್‌ನ ಕಾರ್ಯದರ್ಶಿಗೆ ಬರೆದ ಪತ್ರ ಇಲ್ಲಿದೆ’ ಎಂದು ದಾಖಲೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

‘ಆರ್‌ಎಸ್‌ಎಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷ, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷ, ದೇಶ ವಿರೋಧಿತ್ವಕ್ಕೆ 100 ವರ್ಷಗಳು’ ಎಂದು ಅವರು ಟೀಕಿಸಿದ್ದಾರೆ.

‘ಇತಿಹಾಸವು ಆರ್‌ಎಸ್‌ಎಸ್ ದೇಶಕ್ಕೆ ಬಗೆದ ದ್ರೋಹದ ಉದಾಹರಣೆಗಳಿಂದ ತುಂಬಿಕೊಂಡಿದೆ. ಇಡೀ ಬಿಜೆಪಿ ವ್ಯವಸ್ಥೆ ಎಷ್ಟೇ ಪ್ರಯತ್ನಿಸಿದ್ದರೂ ಆರ್‌ಎಸ್‌ಎಸ್‌ನ ಸಂವಿಧಾನ ವಿರೋಧಿ ಚರಿತ್ರೆಯನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಇತಿಹಾಸವನ್ನು ತಿಳಿದುಕೊಳ್ಳುವ ಸಮಯ ಇದು’ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...