ರೂಪೇಶ್ ರಾಜಣ್ಣ ಮೇಲೆ ಬ್ಲ್ಯಾಕ್ ಮೇಲ್ ಆರೋಪ, ಸಚಿವರ ಮನೆ ಮುಂದೆ ಪ್ರತಿಭಟನೆ, ಬಂಧನ

Date:

ಬೆಂಗಳೂರಿನ ಗಾಲ್ಫ್‌ ಮೈದಾನ ರಸ್ತೆಯಲ್ಲಿರುವ ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಅವರ ಸರ್ಕಾರಿ ನಿವಾಸಕ್ಕೆ ಮಂಗಳವಾರ ರೂಪೇಶ್ ರಾಜಣ್ಣ ಮತ್ತು ತಂಡ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆಯಿತು.

- Advertisement -

ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರು ರೂಪೇಶ್ ರಾಜಣ್ಣ ವಿರುದ್ದ ಬ್ಲ್ಯಾಕ್ ಮೇಲ್ ಆರೋಪ ಮಾಡಿದ್ದರು. ಇದಕ್ಕಾಗಿ ಸರ್ಫರಾಜ್ ಖಾನ್ ವಿರುದ್ದ ಜಮೀರ್ ಮನೆ ಮುಂದೆ ಪ್ರತಿಭಟನೆಗೆ ರೂಪೇಶ್ ರಾಜಣ್ಣ ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರತಿಭಟನೆ ವೇಳೆ ಸ್ಥಳದಲ್ಲಿದ್ದ ಪೊಲೀಸರು ರೂಪೇಶ್ ರಾಜಣ್ಣ ಅವರನ್ನು ತಡೆದರು. ಅಲ್ಲದೆ, ರೂಪೇಶ್ ರಾಜಣ್ಣ ಸೇರಿ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.‌

“ಸರ್ಫರಾಜ್ ಖಾನ್ ಅವರು ನನ್ನ ಮೇಲಿನ ಸುಳ್ಳು ಆರೋಪ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಸತ್ಯ ತಿಳಿಸದೆ ನಾ ಹಿಂದೆ ಸರಿಯೋಲ್ಲ. ನೀವು ಹೇಳಿರೋದು ಸತ್ಯ ಅಂತ ದಾಖಲೆ ಸಮೇತ ನಿರೂಪಿಸಿ. ನಾಳೆ ನಿಮ್ಮ ಕಚೇರಿಗೆ ಬರುತ್ತಿರುವೆ ದಯವಿಟ್ಟು ಅಲ್ಲಿಯೇ ಇರಿ” ಎಂದು ಪ್ರತಿಭಟನೆಗೂ ಮೊದಲು ತಮ್ಮ ಫೇಸ್ ಬುಕ್ ಖಾತೆಯಲ್ಲಿ ರೂಪೇಶ್ ರಾಜಣ್ಣ ಬರೆದುಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಕಾಂಗ್ರೆಸ್‌ ಶಾಸಕ ಬಿ ಆರ್ ಪಾಟೀಲ್ ಅವರು ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರ ಜೊತೆಗೆ ಫೋನ್‌ನಲ್ಲಿ ನಡೆಸಿದ್ದ ಮಾತುಕತೆ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ವಸತಿ ಇಲಾಖೆಯಲ್ಲಿ ನಡೆಯುತ್ತಿದ್ದ ಅಕ್ರಮಗಳ ಬಗ್ಗೆ ಬಿ ಆರ್ ಪಾಟೀಲ್ ಆರೋಪ ಮಾಡಿದ್ದರು. ಇದನ್ನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸರ್ಫರಾಜ್ ಖಾನ್ ತಿಳಿಸಿದ್ದರು.

ಇದರ ಬೆನ್ನಲ್ಲೇ ಅವರ ವಿರುದ್ದ ಕೆಲವೊಂದು ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಸ್ಪಷ್ಟನೆ ನೀಡಿದ್ದ ಅವರು, ರೂಪೇಶ್ ರಾಜಣ್ಣ ವಿರುದ್ಧನೂ ಆರೋಪ ಮಾಡಿದ್ದರು. ಆದರೆ ಇದೀಗ ಅದಕ್ಕೆ ರೂಪೇಶ್ ರಾಜಣ್ಣ ಜಮೀರ್ ಅವರ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...