ನನ್ನ ಮೌನ ದೌರ್ಬಲ್ಯವಲ್ಲ; ಟೂರ್ ಪ್ಲ್ಯಾನ್ ಮುಂದೆ ಕೂಡ ಇರುತ್ತೆ: ಸತೀಶ್ ಜಾರಕಿಹೊಳಿ

Date:

  • ಪಕ್ಷದ ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇನೆ
  • ವರ್ಗಾವಣೆ ವಿಚಾರವಾಗಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ

ವರ್ಗಾವಣೆ ವಿಚಾರದಲ್ಲಿ ಹಸ್ತಕ್ಷೇಪ ಆಗಿದೆ. ಪಕ್ಷದ ಹಿತದೃಷ್ಟಿಯಿಂದ ಹೊಂದಾಣಿಕೆ ಆಗಿದ್ದೇನೆ. ಹೀಗಂದ ಮಾತ್ರಕ್ಕೆ ನನ್ನ ಮೌನ ದೌರ್ಬಲ್ಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

- Advertisement -

ಬೆಳಗಾವಿ ರಾಜಕಾರಣದ ಬಗ್ಗೆ ತಲೆಎತ್ತಿರುವ ವಿವಾದದ ಹಿನ್ನಲೆಯಲ್ಲಿ ಮೌನ ಮುರಿದ ಅವರು ಬೆಂಗಳೂರಿನಲ್ಲಿ ಮಾತನಾಡಿ, “ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪ ಆಗಿದೆ. ಈ ಹಿಂದೆ ಸಾಕಷ್ಟು ಭಾರಿ ಆಗಿದೆ. ನಾನು ಕೂಡ ಹೊಂದಾಣಿಕೆ ಮಾಡಿಕೊಂಡಿದ್ದೇನೆ.‌ ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಾನು ಎಲ್ಲವನ್ನು ಅನುಸರಿಸಿಕೊಂಡು ಬರುತ್ತಿರುವೆ. ಪಕ್ಷದ ದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇನೆ. ಕಳೆದ 30 ವರ್ಷದ ರಾಜಕೀಯದಲ್ಲಿ ನನ್ನ ಮೌನ ಸಕ್ಸಸ್ ಕೊಟ್ಟಿದೆ” ಎಂದು ಹೇಳಿದರು.

“ಕೆಲವು ವರ್ಗಾವಣೆಗೆ ಶಿಫಾರಸು ಮಾಡಿದ್ದೆ. ಅದನ್ನು ಮಾಡುವುದು ಬಿಡುವುದು ಅವರಿಗೆ ಬಿಟ್ಟಿದ್ದು. ನಿಗಮ, ಮಂಡಳಿ ಕಾರ್ಯಕರ್ತರಿಗೆ ಕೊಡಿ ಅಂತ ಶಿಫಾರಸು ಮಾಡಿರುವೆ. ಕೇವಲ ಶಾಸಕರಿಗೆ ಮಾತ್ರ ಬೇಡ ಅಂತನೂ ಹೇಳಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸತೀಶಣ್ಣ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

“ಲಕ್ಷ್ಮಣ‌ ಸವದಿ ಕೂಡ ಕಾಂಗ್ರೆಸ್ಸಿಗೆ ಬರುವಾಗ ನನ್ನ ಜೊತೆ ಮಾತನಾಡಿದ್ದರು. ಕಿರಿಕಿರಿ ಮಾಡೋದಾದರೆ ನಾನು ಬರಲ್ಲ ಅಂದಿದ್ದರು. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಹೆಸರನ್ನು ನೀಡಿದ್ದೇನೆ. ಲಕ್ಷ್ಮಣ ಸವದಿ ಎಲ್ಲೂ ಕಾರ್ಯಾಧ್ಯಕ್ಷ ಸ್ಥಾನ ಕೇಳಿಲ್ಲ. ಮಾಡೋದಾದ್ರೆ ನಮ್ಮ ಅಭ್ಯಂತರ ಏನು ಇಲ್ಲ. ಸವದಿ, ನಿಂಬಾಳ್ಕರ್ ಯಾರೆ ಕಾರ್ಯಾಧ್ಯಕ್ಷರಾದ್ರೂ ಅಡ್ಡಿಯಿಲ್ಲ” ಎಂದು ಹೇಳಿದರು.

“ಟೂರ್ ಪ್ಲ್ಯಾನ್ ಮುಂದೆ ಕೂಡ ಇರುತ್ತೆ. ನಾವು ಟೂರು ಮಾಡಲು ಯಾವುದೇ ಅಡ್ಡಿಯಿಲ್ಲ. ಶಾಸಕರು ಕ್ಷೇತ್ರದ ಕೆಲಸ ಮಾತ್ರ ಅಲ್ಲ. ಒಟ್ಟಾಗಿ ಪ್ರವಾಸ ಕೂಡ ಮಾಡಬೇಕು. ಮುಂದೆ ಆ ಬಗ್ಗೆ ಪ್ಲಾನ್ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...