ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಎಲ್ಲೆಡೆ ಪ್ರವಾಹ ಉಂಟಾಗಿದೆ. ಕಲಬುರಗಿ ತಾಲ್ಲೂಕಿನ ಹಲವು ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿದುಕೊಂಡಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ದಸರಾ ರಜೆ ನಡುವೆಯೂ ಕೆಲವು ಆಡಳಿತ ಮಂಡಳಿಯವರು ಶಾಲೆ ನಡೆಸುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಸದರಿ ಶಾಲೆಗಳಿಗೆ ಸೆಪ್ಟೆಂಬರ್ 27 ಮತ್ತು 28 ರಂದು ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಶಾಲೆಗಳಿಗೆ ಈಗಾಗಲೇ ದಸರಾ ರಜೆ ಇದ್ದು ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿಯವರು ದಸರಾ ರಜೆಯಿಂದ ವಿನಾಯತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿದ್ದಾರೆ.
