ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

Date:

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ತೀವ್ರಗೊಳಿಸಿದೆ. ತನಿಖೆಯ ಭಾಗವಾಗಿ ರಚಿಸಲಾಗಿರುವ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞ ವೈದ್ಯರ ವಿಶೇಷ ಮಂಡಳಿಯು ಮಂಗಳವಾರ ಸಂಜೆ ಸೌಜನ್ಯ ಮೃತದೇಹ ಪತ್ತೆಯಾಗಿದ್ದ ಧರ್ಮಸ್ಥಳದ ಮಣ್ಣಸಂಕ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ವೈಜ್ಞಾನಿಕ ಸ್ಥಳ ಪರಿಶೀಲನೆ ಮತ್ತು ಮಹಜರು ನಡೆಸಿದೆ.

- Advertisement -

2012ರ ಅಕ್ಟೋಬರ್ 10ರಂದು ಮಣ್ಣಸಂಕ ಬಳಿಯ ಪೊದೆಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ಮರುತನಿಖೆ ಆರಂಭಿಸಿರುವ ಎಸ್‌ಐಟಿ ತಂಡವು ಕಳೆದ ತಿಂಗಳಷ್ಟೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಕಲೆಹಾಕಿತ್ತು. ಇದೀಗ ಹಿಂದಿನ ತನಿಖೆಗಳಲ್ಲಿ ದಾಖಲಾಗಿರುವ ಅಂಶಗಳನ್ನು ವೈಜ್ಞಾನಿಕವಾಗಿ ಮರುಪರಿಶೀಲಿಸುವ ಉದ್ದೇಶದಿಂದ ಬೆಂಗಳೂರು, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳ ಮೂವರು ಹಿರಿಯ ವಿಧಿವಿಜ್ಞಾನ ತಜ್ಞ ವೈದ್ಯರನ್ನೊಳಗೊಂಡ ವಿಶೇಷ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಎಸ್‌ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಅವರ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ತೆರಳಿದ ಈ ತಜ್ಞರ ತಂಡವು, ಮೃತದೇಹ ಪತ್ತೆಯಾದ ಸಂದರ್ಭದಲ್ಲಿ ಸೆರೆಹಿಡಿಯಲಾಗಿದ್ದ ಛಾಯಾಚಿತ್ರಗಳು, ವಿಡಿಯೋ ದಾಖಲೆಗಳು ಹಾಗೂ ಇತರ ದೃಶ್ಯ ಪುರಾವೆಗಳನ್ನು ಆಧರಿಸಿ ಸ್ಥಳದ ಭೌಗೋಳಿಕ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದೆ.

ಸೌಜನ್ಯ ಮೇಲೆ ಬೇರೆಡೆ ಅತ್ಯಾಚಾರ ಮತ್ತು ಕೊಲೆ ಎಸಗಿ, ಬಳಿಕ ಮೃತದೇಹವನ್ನು ಮಣ್ಣಸಂಕ ಅರಣ್ಯ ಪ್ರದೇಶಕ್ಕೆ ತಂದು ಎಸೆಯಲಾಗಿದೆಯೇ ಅಥವಾ ಇದೇ ಸ್ಥಳದಲ್ಲಿಯೇ ಈ ಕೃತ್ಯ ನಡೆದಿದೆಯೇ ಎಂಬ ಪ್ರಮುಖ ಸಂದೇಹವನ್ನು ಬಗೆಹರಿಸುವುದು ಈ ವೈಜ್ಞಾನಿಕ ತಪಾಸಣೆಯ ಮುಖ್ಯ ಗುರಿಯಾಗಿದೆ. ಸ್ಥಳ ಪರಿಶೀಲನೆ ಮತ್ತು ವೈಜ್ಞಾನಿಕ ವಿಶ್ಲೇಷಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಈ ವಿಶೇಷ ವೈದ್ಯಕೀಯ ಮಂಡಳಿಯು ತನ್ನ ಸಮಗ್ರ ಅಂತಿಮ ವರದಿಯನ್ನು ಅಧಿಕೃತವಾಗಿ ಎಸ್‌ಐಟಿಗೆ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ...

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...