30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ನೀಡಲಿದೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ: ಪ್ರಿಯಾಂಕ್ ಖರ್ಗೆ

Date:

ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

“ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು 100 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು, ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ-ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಕೇಂದ್ರಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರ್ಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡ್ಸೆಟಿ-ಆರ್ಸೆಟಿ ಸರ್ಕಾರೇತರ ಬೆಂಬಲ ಸಂಸ್ಥೆಗಳ (TSA) ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ, ಅನುಸರಣೆ ಮತ್ತು ಬೆಂಬಲ ನೀಡುವ ಮೂಲಕ 30,000 ಮಹಿಳೆಯರಿಗೆ ಸ್ವ-ಉದ್ಯೋಗ ಪ್ರಾರಂಭಿಸುವಂತೆ ಪ್ರೇರೆಪಿಸಲಾಗುವುದು, ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

“ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿರುವುದರಿಂದ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸುವ ಅವಶ್ಯಕತೆ ಇರುವುದನ್ನು ಗಮನಿಸಿ, ಆಯ-ವ್ಯಯದಲ್ಲಿ ಘೋಷಿಸಿರುವಂತೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಇದರಿಂದಾಗಿ ಮಹಿಳೆಯರಲ್ಲಿ ಅಡಗಿರುವ ಸಾಮರ್ಥ್ಯ ವೃದ್ಧಿಗೊಳ್ಳುವುದಲ್ಲದೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದರ ಜೊತೆಗೆ ಸ್ವಾವಲಂಬಿಗಳನ್ನಾಗಿ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...