ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

Date:

ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಸಿಂಧೂರಿ ಅವರು ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ದೂರನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರ ಪೀಠವು, ರೂಪ ಅವರಿಗೆ ಸಾಮಾಜಿಕ ಪೋಸ್ಟ್‌ಗಳನ್ನು ತೆಗೆಯುವಂತೆ ಹೇಳಿ ಮುಂದಿನ ವಿಚಾರಣೆಯನ್ನು ಜನವರಿ 12, 2024 ಕ್ಕೆ ಮುಂದೂಡಿತು.

ವಿವಾದಿತ ಪೋಸ್ಟ್‌ಗಳನ್ನು ತೆಗೆದುಹಾಕುವ ಬಗ್ಗೆ ಡಿ ರೂಪಾ ಅವರ ಭರವಸೆಯನ್ನು ದಾಖಲಿಸಿದ ನ್ಯಾಯಾಲಯ, ಬಾಕಿ ಉಳಿದಿರುವ ವಿವಾದಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಇಬ್ಬರೂ ಅಧಿಕಾರಿಗಳಿಗೆ ಖಡಕ್‌ ಸಂದೇಶ ರವಾನಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಿಸೆಂಬರ್ 15 ರ ತನ್ನ ಆದೇಶದಲ್ಲಿ ಪೀಠವು, “ಕಕ್ಷಿದಾರರ ನಡುವೆ ಬಾಕಿ ಉಳಿದಿರುವ ಎಲ್ಲ ವಿವಾದಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂಬ ಅಂಶವನ್ನು ಪರಿಗಣಿಸಿ ವಾದಿ, ಪ್ರತಿವಾದಿ ಇಬ್ಬರು ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಕ್ಕೆ ಸಂದರ್ಶನ ಅಥವಾ ಮಾಹಿತಿಯನ್ನು ನೀಡಬಾರದು ಎಂದು ಸೂಚಿಸಿತು.

ಈ ಸುದ್ದಿ ಓದಿದ್ದೀರಾ? ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

ಯಾವುದೇ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದು ಹಾಕಲಾಗಿಲ್ಲ ಎಂದು ಕಂಡುಬಂದರೆ, ಅರ್ಜಿದಾರರ ವಕೀಲರಿಗೆ ಅದರ ಬಗ್ಗೆ ತಿಳಿಸಲಾಗುವುದು ಎಂದು ಸಿಂಧೂರಿ ಅವರ ವಕೀಲರಿಗೆ ಪೀಠ ತಿಳಿಸಿತು.

ಸಿಂಧೂರಿ ಅವರು ಸಲ್ಲಿಸಿರುವ ವಿಚಾರಣೆಯ ಪ್ರತಿಗಳನ್ನು ದಾಖಲೆಯಲ್ಲಿ ಇರಿಸುವಂತೆ ಪೀಠವು ಸೂಚಿಸಿದೆ. ಬಾಕಿ ಇರುವ ಸಿವಿಲ್ ಮೊಕದ್ದಮೆಯಲ್ಲಿ ರೂಪಾ ಅವರು ಸಲ್ಲಿಸಿದ ಅಫಿಡವಿಟ್ ಅನ್ನು ಸಲ್ಲಿಸಲು ಇದು ಅವಕಾಶ ಮಾಡಿಕೊಟ್ಟಿತು.

“ಈ ಮಧ್ಯೆ , ಈ ಅರ್ಜಿಯ ಕ್ರಿಮಿನಲ್ ಪ್ರಕರಣದ ವಿಷಯವಾಗಿ ಮುಂದೆ ಮುಂದುವರಿಯುವುದಿಲ್ಲ” ಎಂದು ಪೀಠ ಆದೇಶಿಸಿದೆ.

ರೂಪಾ ಪರ ಹಿರಿಯ ವಕೀಲ ಆದಿತ್ಯ ಸೋಂಧಿ ವಾದ ಮಂಡಿಸಿದರೆ, ಸಿಂಧೂರಿ ಪರ ಹಿರಿಯ ವಕೀಲ ವಿನಯ್‌ ನವಾರೆ ವಾದ ಮಂಡಿಸಿದರು.

ಇಬ್ಬರು ಅಧಿಕಾರಿಗಳು ತಮ್ಮ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳದಿರುವುದು ಬೇಸರ ತಂದಿದೆ ಎಂದೂ ಪೀಠ ಈ ಸಂದರ್ಭದಲ್ಲಿ ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ...

ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು...

ಶಿವಮೊಗ್ಗ | ಗೀತಾರನ್ನು ಸಂಸದೆಯಾಗಿ ನೋಡುವ ಆಸೆ ಇದೆ: ನಟ ಶಿವ ರಾಜ್‌ಕುಮಾರ್

ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ....

ಕೃಷಿ ಇಲಾಖೆಗೆ ಶೀಘ್ರದಲ್ಲೇ 750 ಹುದ್ದೆಗಳ ಭರ್ತಿ: ಸಚಿವ ಎನ್. ಚಲುವರಾಯಸ್ವಾಮಿ

ಕೃಷಿ ಇಲಾಖೆಯ ಕಾರ್ಯ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುವಾಗುವಂತೆ ಕ್ಷೇತ್ರ ಮಟ್ಟದಲ್ಲಿ...