ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ: ಜಸ್ಟೀಸ್ ನಾಗಮೋಹನ್ ದಾಸ್

Date:

Advertisements

ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿಯನ್ನು ಮತ್ತೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಏಕಸದಸ್ಯ ಆಯೋಗ ಅಧ್ಯಕ್ಷ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು ತಿಳಿಸಿದರು. ಮಳೆ/ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಸಮೀಕ್ಷೆ ಪೂರ್ಣಗೊಂಡಿಲ್ಲ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು(Emperical Data) ಸಂಗ್ರಹಿಸುವ ಕಾರ್ಯವನ್ನು ಮೇ 5ರಿಂದ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿದೆ. ಆದರೆ ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂದು ತಿಳಿಸಿ ಸಮೀಕ್ಷಾ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಸಭೆಯಲ್ಲಿ ವಿನಂತಿಸಿದ್ದಾರೆ ಎಂದು ಜಸ್ಟೀಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ: ಹೆಚ್.ಎನ್.ನಾಗಮೋಹನ್ ದಾಸ್

Advertisements

ಆದ್ದರಿಂದ ಬಿಬಿಎಂಪಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಕೂಡ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕು ಎಂದು ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಕೋರಿದ್ದಾರೆ. ಈ ಕಾರಣ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗಲು ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷ ಶಿಬಿರ(ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ಜೂನ್ 2ರಿಂದ 8ರವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್‌ ಮೂಲಕ ಸ್ವಯಂ ಘೋಷಣೆ ದಿನಾಂಕವನ್ನು ಜೂನ್ 8ರವರೆಗೆ ವಿಸ್ತರಿಸಲಾಗಿದೆ. ಗಣತಿದಾರರು ರಜಾ ದಿನಗಳಲ್ಲಿಯೂ ಸಹ ಸಮೀಕ್ಷಾ ಬ್ಲಾಕ್‌ನ ವಿಶೇಷ ಶಿಬಿರಗಳಲ್ಲಿ ಕಾರ್ಯನಿರ್ವಹಿಸಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ.

ಈ ಹಿಂದೆ ವಿಶೇಷ ಶಿಬಿರದ ದಿನಾಂಕ ಮರು ನಿಗದಿ ಮಾಡಲಾಗಿತ್ತು. ಮೇ 26ರಿಂದ ಮೇ 28ರ ತನಕ ನಡೆಸಲು ನಿರ್ಧರಿಸಲಾಗಿತ್ತು. ಅನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಮೇ 19ರಿಂದ ಮೇ 28ರ ತನಕ ನಿಗದಿ ಮಾಡಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X