ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ: ಹೆಚ್.ಎನ್.ನಾಗಮೋಹನ್ ದಾಸ್

Date:

ಪರಿಶಿಷ್ಟ ಜಾತಿ ಒಳ‌ಮೀಸಲಾತಿ ಸಂಬಂಧ ಸಮೀಕ್ಷೆ ಅವಧಿಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಏಕಸದಸ್ಯ ಆಯೋಗ ಅಧ್ಯಕ್ಷ ಹೆಚ್.ಎನ್.ನಾಗಮೋಹನ್ ದಾಸ್ ತಿಳಿಸಿದರು.

- Advertisement -

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಶಾಸಕರುಗಳು, ಹಲವು ಸಂಘ-ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ತೀರ್ಮಾನಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಒಳ ಮೀಸಲಾತಿ ಜಾರಿ ವಿಚಾರವಾಗಿ ದತ್ತಾಂಶ ಸಂಗ್ರಹಕ್ಕೆ ನಡೆಯುತ್ತಿದೆ. ಎಸ್‌ಸಿ ಸಮುದಾಯದ ಮನೆ ಮನೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.‌ ಎಸ್‌ಸಿ ಸಮುದಾಯದ ಮನೆ ಮನೆ ಸಮೀಕ್ಷೆ ಮೇ 25ರ ತನಕ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು.

“ವಿಶೇಷ ಶಿಬಿರದ ದಿನಾಂಕ ಮರು ನಿಗದಿ ಮಾಡಿದ್ದು, ಮೇ 26ರಿಂದ ಮೇ 28ರ ತನಕ ನಡೆಯಲಿದೆ. ಅನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ದಿನಾಂಕ ಮೇ 19ರಿಂದ ಮೇ 28ರ ತನಕ ನಿಗದಿ ಮಾಡಿದ್ದು, ಇಲ್ಲಿ ತನಕ 73.72% ಮನೆ ಮನೆ ಸಮೀಕ್ಷೆ ಪೂರ್ಣ ಆಗಿದೆ” ಎಂದರು.

ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು?

“ಬೆಂಗಳೂರಿನಲ್ಲಿ ಕೇವಲ 36% ಮಾತ್ರ ಸಮೀಕ್ಷೆ ಆಗಿದ್ದು, ಅಪಾರ್ಟ್‌ಮೆಂಟ್‌ಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಿಲ್ಲ. ಅವರ ಮಾಹಿತಿಯನ್ನೇ ನೀಡಲ್ಲ ಎಂದರೆ ಅವರಿಗೆ ನೀರು, ಕರೆಂಟ್ ಕಟ್ ಮಾಡಿದರೆ ಹೇಗೆ? ಅವರು‌ ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು? ಈಗಾಗಲೇ ಬಿಬಿಎಂಪಿಗೆ ಸೂಚನೆ ಕೊಟ್ಟಿದ್ದೇವೆ. ಸಮೀಕ್ಷೆ ಸಹಕರಿಸಲು ಎಚ್ಚರಿಕೆ ಕೊಡುವಂತೆ ಲಿಖಿತವಾಗಿ ಬಿಬಿಎಂಪಿಗೆ ಸೂಚಿಸಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲು‌ ಸಹ ಸೂಚಿಸಿದ್ದೇವೆ. ಖಾಸಗಿ ಶಾಲೆಯ ಶಿಕ್ಷಕರನ್ನ ಸಮೀಕ್ಷೆಗೆ ನೇಮಿಸಲು ಸೂಚಿಸಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಮೆರೆಯುತ್ತಿರುವ ಕ್ರೌರ್ಯ ಮಕ್ಕಳ ಮನಸುಗಳನ್ನೂ ಆಳಿದರೆ ಅದರ ಹೊಣೆ ಯಾರದು?

“ಅಪಾರ್ಟ್‌​ಮೆಂಟ್​ಗಳಲ್ಲಿ ಸಮೀಕ್ಷೆಗೆ ಅಡ್ಡಿಪಡಿಸುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ. ಅಡ್ಡಿ ಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಸಮೀಕ್ಷೆ ಕರ್ತವ್ಯಕ್ಕೆ ಅಡ್ಡಿಪಡಿಸಬಾರದು. ನಿಮ್ಮಲ್ಲಿನ ಮಾಹಿತಿ ನೀಡಿ ಅಷ್ಟೇ. ಯಾರೂ ಸಮೀಕ್ಷೆಗೆ ತಡೆ ಮಾಡುತ್ತಾರೆ ಅವರು ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆಗೆ ಈ ಸಂಬಂಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ” ಎಂದರು.

“ಎಸ್​ಸಿಯೇತರರು ಅಂದರೆ ಯಾವುದೇ ಮಾಹಿತಿ ಪಡೆಯುವುದು ಬೇಡ ಅಂದಿದ್ದೇವೆ. ಸಮೀಕ್ಷೆ ಮುಗಿದ ಮೇಲೆ ದತ್ತಾಂಶ ವಿಶ್ಲೇಷಣೆ ಮಾಡುತ್ತೇವೆ. ಮಾನದಂಡದ ಪ್ರಕಾರ ಏನೆಲ್ಲಾ ವರ್ಗೀಕರಣ ಆಗಬೇಕು ಅದನ್ನು ಮಾಡಲಿದ್ದೇವೆ. ಇನ್ನು ಯಾವುದೇ ವಿಳಂಬ ಆಗದಂತೆ ವರದಿ ನೀಡುತ್ತೇವೆ. ಆದಿ ಕರ್ನಾಟಕ, ಆದಿ ಆಂಧ್ರ, ಆದಿ ಜಾಂಬವ ಸಂಬಂಧ ಜಾತಿ ಹೆಸರು ಹೇಳಬೇಕು. ಒಂದು ವೇಳೆ ಆದಿ ಕರ್ನಾಟಕ ಅಂದರೆ ಈ 101ರಲ್ಲಿ ಯಾವ ಉಪಜಾತಿ ಎಂದು ಹೇಳಬೇಕು. ಹೇಳಿಲ್ಲವಾದರೆ ಹಾಗೇ ನಮೂದು ಮಾಡಲಾಗುತ್ತದೆ. ಕೆಲ ಮಾನದಂಡದ ಆಧಾರದ ಮೇಲೆ ನಾವು ಮುಂದೆ ಆದಿ ಕರ್ನಾಟಕ, ಆದಿ ಆಂಧ್ರದ ಜಾತಿಯವರನ್ನು ಯಾವ ಉಪಜಾತಿ ಎಂದು ತೀರ್ಮಾನಿಸುತ್ತೇವೆ” ಎಂದು ತಿಳಿಸಿದರು.

ಗಣತಿದಾರರಿಗೆ ಗೌರವಧನ

“ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಶಿಕ್ಷರಿಗೆ ಶಿಕ್ಷಣ ಇಲಾಖೆಯ ಮಾನದಂಡದ ಪ್ರಕಾರ, ಗೌರವಧನ ನೀಡಲಾಗುತ್ತದೆ. ಶಿಕ್ಷಕೇತರರಿಗೆ ತಲಾ 5,000 ರೂ. ಕೊಡಲಾಗುತ್ತದೆ. ಜೊತೆಗೆ ಪ್ರತಿ ಮನೆಗೆ ತಲಾ 100 ರೂ. ಗೌರವಧನ ಪಾವತಿ ಮಾಡಲಾಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...