ಶಾಲಾ ಬಸ್‌ನಲ್ಲಿ ಮಕ್ಕಳ ಸುರಕ್ಷತೆಗೆ ಶಾಲೆಯೇ ಹೊಣೆ: ಹೈಕೋರ್ಟ್ ಮಹತ್ವದ ಆದೇಶ

Date:

ಮಗು ಶಾಲಾ ಬಸ್ ಹತ್ತಿದಾಗಿನಿಂದ ಮನೆಗೆ ಸುರಕ್ಷಿತವಾಗಿ ತಲುಪುವವರೆಗೂ ಮಗುವಿನ ರಕ್ಷಣೆಯ ಸಂಪೂರ್ಣ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಾಲಾ ಬಸ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಡ್ಯ ಜಿಲ್ಲೆಯ ಮದ್ದೂರಿನ ದಿವ್ಯಜ್ಯೋತಿ ಶಾಲಾ ಆಡಳಿತ ಮಂಡಳಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.

- Advertisement -

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

2025ರ ಆಗಸ್ಟ್ 1ರಂದು ದಿವ್ಯಜ್ಯೋತಿ ಶಾಲೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಸಹಪಾಠಿಗಳು ತಂದಿದ್ದ ಸಿಡಿಮದ್ದು (ಪಟಾಕಿ ಮಾದರಿ) ಸಿಡಿದು 4ನೇ ತರಗತಿಯ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದನು. ವೈದ್ಯಕೀಯ ವರದಿಯ ಪ್ರಕಾರ, ಬಾಲಕನಿಗೆ ಶೇ. 40ರಷ್ಟು ಅಂಗವೈಕಲ್ಯ ಉಂಟಾಗಿದೆ. ಈ ಘಟನೆಗೆ ಶಾಲೆಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು.

ಮಕ್ಕಳ ಸುರಕ್ಷತೆಯು ಕೇವಲ ಸೌಜನ್ಯದ ವಿಷಯವಲ್ಲ; ಇದು ‘ಕರ್ನಾಟಕ ಶಿಕ್ಷಣ ಸಂಸ್ಥೆಗಳ ನಿಯಮಾವಳಿಗಳು 2018’ರ ಅಡಿ ಶಾಲೆಯು ಕಡ್ಡಾಯವಾಗಿ ಪಾಲಿಸಬೇಕಾದ ಶಾಸನಬದ್ಧ ಜವಾಬ್ದಾರಿಯಾಗಿದೆ.

ಬೆಳೆಯುವ ವಯಸ್ಸಿನ ಮಗು ದೃಷ್ಟಿಹೀನತೆಯ ಶಾಪದೊಂದಿಗೆ ಬದುಕುವಂತಹ ಗಂಭೀರ ಪರಿಸ್ಥಿತಿಯಲ್ಲಿ, ತನಿಖೆಯ ಆರಂಭಿಕ ಹಂತದಲ್ಲೇ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಘಟನಾ ಸಮಯದಲ್ಲಿ ಬಸ್‌ನಲ್ಲಿ ಅಟೆಂಡರ್ ಇದ್ದರೇ? ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ? ಅಥವಾ ಕೇವಲ ‘ಅಲಂಕಾರಿಕ ವಸ್ತು’ಗಳಾಗಿದ್ದವೇ? ಮತ್ತು ಅಪಾಯಕಾರಿ ವಸ್ತುಗಳು ಬಸ್‌ನೊಳಗೆ ಹೇಗೆ ಪ್ರವೇಶಿಸಿದವು? ಎಂಬ ಪ್ರಶ್ನೆಗಳಿಗೆ ತನಿಖೆಯಿಂದಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ಕನ್ನಡದಲ್ಲೇ ನಡೆಯಲಿ: ಕರವೇ ಆಗ್ರಹ

ಶಾಲಾ ಪರ ವಕೀಲರು, ಇದು ಶಾಲೆ ಬಿಟ್ಟ ನಂತರ ಬಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮಾಡಿದ ಆಕಸ್ಮಿಕ ಕೃತ್ಯವಾಗಿದ್ದು, ಆಡಳಿತ ಮಂಡಳಿಯನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲವೆಂದು ವಾದಿಸಿದರು. ಆದರೆ, ಸರ್ಕಾರದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಘಟನೆ ನಡೆದಾಗ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲಿಲ್ಲ ಮತ್ತು ಅಟೆಂಡರ್ ಕೂಡ ಗೈರಾಗಿದ್ದರು ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ವಾದಗಳನ್ನು ಪರಿಗಣಿಸಿದ ನ್ಯಾಯಾಲಯವು, ಆಡಳಿತ ಮಂಡಳಿಯ ನಿರ್ಲಕ್ಷ್ಯ ಇದೆಯೇ ಅಥವಾ ಇಲ್ಲವೇ ಎಂಬುದು ಪೂರ್ಣ ಪ್ರಮಾಣದ ತನಿಖೆಯ ನಂತರವೇ ಸಾಬೀತಾಗಬೇಕು ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು? ವಿಮಾನದ ಕಾಕ್‌ಪಿಟ್‌ ಹೇಗಿರುತ್ತದೆ ಬಲ್ಲಿರಾ?

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ...

ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ...