ಉದ್ಯೋಗ ಮಾಹಿತಿ | ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ: ಜು.18 ಕೊನೆಯ ದಿನ

Date:

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ(ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿದಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಈ ಬಗ್ಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆ ಹರಡಿಸಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು/ತಿದ್ದುಪಡಿ(EDIT) ಮಾಡಲು ಜುಲೈ 11 ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು/ತಿದ್ದುಪಡಿ ಮಾಡಲು ಜುಲೈ 18 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಬಳಿಕ ಜು.22ರವರಗೆ ಅರ್ಜಿಯನ್ನು EDIT ಮಾಡಲಾಗುವುದು. 25ರಂದು ತಾತ್ಕಾಲಿಕ ಕಾರ್ಯಭಾರ(Workload)ದ ದಿನಾಂಕ ಪ್ರಕಟಿಸಲಾಗುವುದು. ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರ ಪಟ್ಟಿಯನ್ನು ಜು.26ರಂದು, ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಜು.28ರಂದು ಪ್ರಕಟಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳು

ಯುಜಿಸಿ 2018ರ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳನ್ನು(ಎಸ್‌ಸಿ/ಎಸ್ ಟಿ/ಓಬಿಸಿ/ವಿಶೇಷ ಚೇತನರಿಗೆ ಶೇ.50) ಹೊಂದಿರಬೇಕು. ಇದರೊಂದಿಗೆ ಎನ್‌ಇಟಿ/ಎಸ್‌ಎಲ್‌ಇಟಿ/ಕೆ.ಸೆಟ್/ಪಿಹೆಚ್.ಡಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ.

ಮೆರಿಟ್ ಅಂಕಗಳ ಹಂಚಿಕೆ (ಒಟ್ಟು 100 ಅಂಕಗಳು) :

ಸ್ನಾತಕೋತ್ತರ ಪದವಿ ಅಂಕಗಳು: ಅಭ್ಯರ್ಥಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ.25ರಷ್ಟು ಭಾಗವನ್ನು ಪರಿಗಣಿಸಲಾಗುವುದು(ಗರಿಷ್ಠ 25 ಅಂಕಗಳು).

ಹೆಚ್ಚುವರಿ ವಿದ್ಯಾರ್ಹತೆ: ಪಿಹೆಚ್‌ಡಿ ಹೊಂದಿದ್ದಲ್ಲಿ 12 ಅಂಕಗಳು; ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ಹೊಂದಿದ್ದಲ್ಲಿ 09 ಅಂಕಗಳು; ಎಂ.ಫಿಲ್ ಹೊಂದಿದ್ದಲ್ಲಿ 06 ಅಂಕಗಳು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕ(ಮಿತಿ 16 ವರ್ಷಗಳು)ಗಳನ್ನು ನೀಡಲಾಗುವುದು. ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು

2025-26ನೇ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ತಮ್ಮ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆಯನ್ನು ಮಾತ್ರ ಪರಿಗಣಿಸಲಾಗುವುದು. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸುವುದಿಲ್ಲ.

ಸಾಮಾನ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು- https://emis.karnataka.gov.in/application.aspx ಮತ್ತು ಸರ್ಕಾರಿ ಚಿತ್ರಕಲಾ/ಸಂಸ್ಕೃತ ಕಾಲೇಜುಗಳು – https://emis.karnataka.gov.in/AppSFC.aspx ಲಿಂಕ್ ಗಳ ಮೂಲಕ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಈ ಸುದ್ದಿ ಓದಿದ್ದೀರಾ? ಮೂಗಳಖೋಡ ಸರ್ಕಾರಿ ಶಾಲೆಯಲ್ಲಿ ಆಹಾರ ವಿಷಬಾಧೆ: 14 ಮಂದಿ ಮಕ್ಕಳು ಆಸ್ಪತ್ರೆಗೆ ದಾಖಲು, ಎಲ್ಲರೂ ಚೇತರಿಕೆ

ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ಹಾಜರುಪಡಿಸಿದ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಪ್ರಸೂತಿ ರಜೆ ಮೇಲೆ ತೆರಳುವ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://dce.karnataka.gov.in ಅನ್ನು ನಿತ್ಯವೂ ಗಮನಿಸುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...