ಕಂಪನಿಗಳ ಲೇಬಲ್​ ಅಂಟಿಸಿ ನಕಲಿ ಔಷಧಿ ಮಾರಾಟ; ಎಸ್‌ಐಟಿ ತನಿಖೆಗೆ ಚಿಂತನೆ: ಯು ಟಿ ಖಾದರ್

Date:

ರಾಮನಗರ ಜಿಲ್ಲೆಯ ಬಿಡದಿ ಬಳಿ ಪತ್ತೆಯಾಗಿರುವ ಬೃಹತ್ ನಕಲಿ ಔಷಧಿ ಜಾಲಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆ ನಡೆಸಲು ಚಿಂತನೆ ನಡೆಸಲಾಗುವುದು. ಈ ಸಂಬಂಧ ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ರೋಗ್ಯ ಸಚಿವ ಯು ಟಿ ಖಾದರ್ ಹೇಳಿದ್ದಾರೆ.

- Advertisement -

ಈ ಹಗರಣವು ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲದ ಕಾರಣ, ಸಮಗ್ರವಾದ ಮತ್ತು ಕಟ್ಟುನಿಟ್ಟಾದ ತನಿಖೆಗಾಗಿ ಎಸ್‌ಐಟಿ ರಚನೆ ಅನಿವಾರ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಅಧಿವೇಶನ | ಧರ್ಮಸ್ಥಳ ಕ್ಷೇತ್ರದ ಪರ ನಿಂತ ಬಿಜೆಪಿ ಸದಸ್ಯರು, ಎಸ್‌ಐಟಿ ಮಧ್ಯಂತರ ವರದಿ ಸಲ್ಲಿಕೆಗೆ ಆಗ್ರಹ

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಸಿ ಕೆ ತಾಂಡ್ಯಾ ಗ್ರಾಮದ ಫಾರ್ಮ್‌ಹೌಸ್ ಒಂದರ ಮೇಲೆ ಆಹಾರ ಸುರಕ್ಷತೆ, ಔಷಧ ನಿಯಂತ್ರಣ ಇಲಾಖೆ ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಈ ವೇಳೆ ಅಂದಾಜು ₹5 ರಿಂದ ₹6 ಕೋಟಿ ಮೌಲ್ಯದ ನಕಲಿ ಮತ್ತು ಅವಧಿ ಮುಗಿದ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ.

ನಕಲಿ ದಂಧೆ ನಡೆಸುತಿದ್ದ ಪ್ರಮುಖ ಆರೋಪಿ ಸೇರಿ ನಾಲ್ವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕರ ಜೀವದ ಜೊತೆ ಆಟವಾಡಿದ ಈ ಜಾಲದ ಔಷಧಗಳು ಮಾರುಕಟ್ಟೆಯಲ್ಲಿ ಮತ್ತಷ್ಟು ಹಂಚಿಕೆಯಾಗದಂತೆ ತಡೆಯಲು, ವಶಪಡಿಸಿಕೊಂಡ ಔಷಧಿಗಳ ಬ್ಯಾಚ್ ಸಂಖ್ಯೆಗಳನ್ನು ಇಲಾಖೆಯ FDA ಪೋರ್ಟಲ್‌ನಲ್ಲಿ ತಕ್ಷಣವೇ ಬ್ಲಾಕ್ ಮಾಡಲಾಗಿದೆ. ಮಾದರಿಗಳನ್ನು ಸರ್ಕಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೇವಲ ₹600 ಮೌಲ್ಯದ ಸಾಮಾನ್ಯ ಹಾಗೂ ಅವಧಿ ಮುಗಿದ ಔಷಧಿಗಳನ್ನು ತಂದು, ಅವುಗಳಿಗೆ ಫಿಜರ್ (Pfizer) ನಂತಹ ಜಾಗತಿಕ ಬಹುರಾಷ್ಟ್ರೀಯ ಕಂಪನಿಗಳ ನಕಲಿ ಲೇಬಲ್ ಅಂಟಿಸಿ ₹6,000ವರೆಗಿನ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು.

ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಇಂತಹ ನಕಲಿ ಔಷಧಿಗಳನ್ನು ತರಲಾಗುತ್ತಿತ್ತು. ಬಳಿಕ ಕರ್ನಾಟಕದ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್‌ಗಳಿಗೆ ಶೇ. 50ರಷ್ಟು ರಿಯಾಯಿತಿ ದರದಲ್ಲಿ ಸರಬರಾಜು ಮಾಡಲಾಗುತ್ತಿತ್ತು. ಇದರ ಮುಖ್ಯ ಕಿಂಗ್‌ಪಿನ್ ದುಬೈನಲ್ಲಿದ್ದಾನೆ ಎನ್ನಲಾಗಿದೆ. ಪ್ರಕರಣವು ಅಂತಾರಾಷ್ಟ್ರೀಯ ಮಟ್ಟದ ಲಿಂಕ್‌ಗಳನ್ನು ಹೊಂದಿದೆ.

ಇನ್ನೂ ಅಧಿಕ ಆತಂಕಕಾರಿ ವಿಷಯವೆಂದರೆ, ಆಸ್ಪತ್ರೆಗಳ ತುರ್ತು ನಿಗಾ ಘಟಕಗಳಲ್ಲಿ (ICU) ಬಳಸಲಾಗುವ ಪ್ರಾಣರಕ್ಷಕ ಔಷಧಿಗಳನ್ನೂ ಸಹ ಇಲ್ಲಿ ನಕಲಿ ಲೇಬಲ್ ಬಳಸಿ ರೀ-ಪ್ಯಾಕ್ ಮಾಡಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...