ಹಿರಿಯ ಪತ್ರಕರ್ತ, ಕರ್ನಾಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ (92) ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ರೀಯುತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕೋಲಾರ ಜಿಲ್ಲೆ ಚೌಡದೇವನಹಳ್ಳಿಯವರಾದ ಅರ್ಜುನ್ ದೇವ ಅವರು ‘ತಾಯಿನಾಡು’ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ‘ಸಂಯುಕ್ತ ಕರ್ನಾಟಕ’, ‘ಪ್ರಜಾವಾಣಿ’ ಹಾಗೂ ‘ಸೂರ್ಯೋದಯ’ ಪತ್ರಿಕೆಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ(ಕೆಯುಡಬ್ಲ್ಯೂಜೆ) ಕೂಡ ಸೇವೆ ಸಲ್ಲಿಸಿದ್ದರು.
ಅರ್ಜುನ್ ದೇವ ಅವರು ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದೆ. ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕಿದ ಮೋದಿ
ಅರ್ಜುನ್ ದೇವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. “ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ ಅವರ ನಿಧನದ ಸುದ್ದಿ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ್ ಅವರ ನಿಧನದ ಸುದ್ದಿ ನೋವು ತಂದಿದೆ.
ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/myYSkrI08t
— Siddaramaiah (@siddaramaiah) April 24, 2024
