ಪತ್ರಕರ್ತೆಯರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆರ್‌ ಪೂರ್ಣಿಮಾ ಅವಿರೋಧ ಆಯ್ಕೆ

Date:

ಕರ್ನಾಟಕ ಪತ್ರಕರ್ತೆಯರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆರ್‌ ಪೂರ್ಣಿಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

- Advertisement -

ಸಂಘದ ಉಪಾಧ್ಯಕ್ಷೆಯಾಗಿ ಎನ್.ವಿ. ಸೌಮ್ಯರಾಣಿ, ಪ್ರಧಾನ ಕಾರ್ಯದರ್ಶಿಯಾಗಿ ಮಾಲತಿ ಭಟ್, ಜಂಟಿ ಕಾರ್ಯದರ್ಶಿಯಾಗಿ ಡಿ. ಯಶೋದಾ, ಖಜಾಂಚಿಯಾಗಿ ವಾಣಿಶ್ರೀ ಜೆ.ಎನ್., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಪಿ. ಸುಶೀಲಾ, ಕೆ.ಎಚ್.‌ಸಾವಿತ್ರಿ, ಸಿ.ಜಿ. ಮಂಜುಳಾ, ಕಾನ್ಸೆಪ್ಟಾ ಫರ್ನಾಂಡೀಸ್, ಶಮಂತ ಡಿ.ಎಸ್., ಎ.ಬಿ. ರುದ್ರಮ್ಮ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರೂ ಉಮೇದುವಾರಿಕೆ ಸಲ್ಲಿಸಿರಲಿಲ್ಲ. ಇಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಹಿರಿಯ ಪತ್ರಕರ್ತೆ ಆರ್‌ ಪೂರ್ಣಿಮಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಪೂರ್ಣಿಮಾ ಅವರು ಉದಯವಾಣಿ ದಿನಪತ್ರಿಕೆಯ ಬೆಂಗಳೂರು ಆವೃತ್ತಿಯ ಸಂಪಾದಕರಾಗುವ ಮೂಲಕ ದಕ್ಷಿಣ ಭಾರತದ ಮೊದಲ ʼಸಂಪಾದಕಿʼ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅದಕ್ಕೂ ಮೊದಲು ಬಹಳ ವರ್ಷಗಳ ಕಾಲ ಪ್ರಜಾವಾಣಿ ದಿನಪತ್ರಿಕೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಉದಯವಾಣಿಯಿಂದ ಸ್ವಯಂ ನಿವೃತ್ತಿ ಪಡೆದ ನಂತರ ಮಯೂರ ಮಾಸಿಕದ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ತಮ್ಮದೇ ಆದ ಪ್ರಕಾಶನ ಸಂಸ್ಥೆಯ ಮೂಲಕ ಹಲವು ಮೌಲಿಕ ಕೃತಿಗಳನ್ನು ಹೊರತರುವ ಮೂಲಕ ಯಶಸ್ವಿ ಪ್ರಕಾಶಕಿಯೂ ಆಗಿದ್ದಾರೆ. ಅಂಕಣಕಾರ್ತಿಯಾಗಿ, ಅನುವಾದಕಿಯಾಗಿ ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡೂ ಕ್ಷೇತ್ರಗಳಲ್ಲಿ ಹೆಸರಾಗಿದ್ದಾರೆ.

WhatsApp Image 2026 04 30 at 7.18.13 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ʼಶಿವಸೇನೆʼ ವಿವಾದ: ಚುನಾವಣಾ ಆಯೋಗದ ನಿರ್ಧಾರ ಸಮರ್ಥಿಸಿದ ಶಿಂಧೆ ಬಣ

‘ನಿಜವಾದ ಶಿವಸೇನೆ’ಯನ್ನು ಗುರುತಿಸುವ ವಿಚಾರದಲ್ಲಿ ಚುನಾವಣಾ ಆಯೋಗ ಅನುಸರಿಸಿದ ‘ಸಂಘಟನಾ ಬಹುಮತ’...

ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಬೀದರ್‌ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್‌ ಆದ್ಮಿ ಪಕ್ಷದಿಂದ ಸದಸ್ಯತ್ವ...