ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

Date:

Advertisements

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ್ (59) ಅವರು ಸೋಮವಾರ ಬೆಳಗಿನ ಜಾವ 3.13ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ.

ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ, ಕನ್ನಡ ಪ್ರಭ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು.

Advertisements

ಇದನ್ನು ಓದಿದ್ದೀರಾ? ಉಡುಪಿ | ಸನ್ಮಾರ್ಗ, ಅನುಪಮ ಪತ್ರಿಕೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೈ ಸಿ ಅಬ್ದುಲ್ಲಾ ನಿಧನ

ಶೀರ್ಷಿಕೆಗಳ ಮೂಲಕವೇ ಹೆಸರು ಪಡೆದಿದ್ದ ವಸಂತ ನಾಡಿಗೇರ್ ಅವರನ್ನು ಹೆಡ್​ಲೈನ್ ಮಾಸ್ತರ್ ಎಂದೂ ಕರೆಯಲಾಗುತ್ತಿತ್ತು.

ವಸಂತ ನಾಡಿಗೇರ್ ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದ್ದು ಬಳಿಕ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ರಾಸಯಾನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಸಂತ ನಾಡಿಗೇರ್ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮೊದಲು ಎಂಬತ್ತರ ದಶಕದಲ್ಲಿ ಮುಖ ಮಾಡಿದ್ದಾರೆ. ಸಂಯುಕ್ತ ಕರ್ನಾಟಕದಲ್ಲಿ ತನ್ನ ವೃತ್ತಿ ಜೀವನ ಆರಂಭಿಸಿದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.

ವಸಂತ ನಾಡಿಗೇರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ್ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X