ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

Date:

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

- Advertisement -

ನೂರಾರು ಕಥೆ ಹಾಗೂ ಕಾದಂಬರಿಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಅವರು, ತಮ್ಮ ಬರವಣಿಗೆಯ ಮೂಲಕವೇ ಅಪಾರ ಓದುಗ ವರ್ಗವನ್ನು ಸಂಪಾದಿಸಿದ್ದರು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಅಭಿಮಾನಿಗಳು ಮತ್ತು ಸಾಹಿತ್ಯ ದಿಗ್ಗಜರು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚಿತ್ರದುರ್ಗದಲ್ಲಿ 1951ರ ಏಪ್ರಿಲ್ 30ರಂದು ಜನಿಸಿದ ಮುಕ್ತಾ ಅವರು ಸಾಹಿತ್ಯದ ಒಲವುಳ್ಳ ಕುಟುಂಬದಿಂದ ಬಂದವರು. ಮುಖ್ಯೋಪಾಧ್ಯಾಯರಾಗಿದ್ದ ತಂದೆ ಸಿ.ಬಿ. ನರಸಿಂಹಮೂರ್ತಿ, ಖ್ಯಾತ ರಂಗಭೂಮಿ ನಟರಾಗಿದ್ದ ಅಣ್ಣ ಸಿ.ಬಿ. ಜಯರಾಯರು ಹಾಗೂ ತಾಯಿ ಕಮಲಮ್ಮ ಅವರ ನಿರಂತರ ಪ್ರೋತ್ಸಾಹದಿಂದ ಬೆಳೆದ ಇವರು, ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಬಿ.ಎ. ಮತ್ತು ಸರ್ಕಾರಿ ಕಾಲೇಜಿನಲ್ಲಿ ಬಿ.ಎಡ್. ಪದವಿ ಪಡೆದರು. ಬಳಿಕ ಪ್ರೌಢಶಾಲಾ ಶಿಕ್ಷಕಿಯಾಗಿ, ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಪ್ರಾಥಮಿಕ ಶಾಲೆಯಲ್ಲಿದ್ದಾಗಲೇ ಶಿಕ್ಷಕ ಚನ್ನಬಸವಯ್ಯ ಅವರು ಹೇಳುತ್ತಿದ್ದ ಕಥೆಗಳು ಹಾಗೂ ತ.ರಾ.ಸು. ಅವರ ‘ಚಂದವಳ್ಳಿಯ ತೋಟ’ ಕಾದಂಬರಿಯ ಓದು ಇವರಲ್ಲಿ ಸಾಹಿತ್ಯದ ಬೀಜ ಬಿತ್ತಿತು. ಅಕ್ಕ ಪದ್ಮಜಾ ಸುಂದರೇಶ್ ಅವರ ‘ಅನಿರೀಕ್ಷಿತ’ ಕಾದಂಬರಿಯಿಂದ ಪ್ರೇರಿತರಾಗಿ ಬರೆಯಲಾರಂಭಿಸಿದ ಮುಕ್ತಾ, ‘ಆಶ್ರಯ’ ಎಂಬ ಮೊದಲ ಕಾದಂಬರಿ ರಚಿಸುವ ಮೂಲಕ ಸಾಹಿತ್ಯ ಕೃಷಿಗೆ ಅಡಿಪಾಯ ಹಾಕಿದರು. ಬಳಿಕ ಇವರ ಕಥೆಗಳು ನಾಡಿನ ಪ್ರಮುಖ ವಾರಪತ್ರಿಕೆಗಳಲ್ಲಿ ಪ್ರಕಟವಾಗತೊಡಗಿದವು.

ತಮ್ಮ ದೀರ್ಘಕಾಲದ ಸಾಹಿತ್ಯ ಸೇವೆಯಲ್ಲಿ ‘ಅನಾವರಣ’, ‘ಅಪರಿಚಿತರು’, ‘ಜೀವನ ಚಕ್ರ’, ‘ಅಮೃತಮಯಿ’ ಸೇರಿದಂತೆ 75ಕ್ಕೂ ಹೆಚ್ಚು ಕಾದಂಬರಿಗಳು, ಹತ್ತಾರು ಕಿರುಕಾದಂಬರಿಗಳು ಹಾಗೂ ಕಥಾಸಂಕಲನಗಳನ್ನು ಮುಕ್ತಾ ರಚಿಸಿದ್ದಾರೆ. ಸುಧಾ, ಮಲ್ಲಿಗೆ, ಕರ್ಮವೀರ, ಮಂಗಳ, ಸಂಯುಕ್ತ ಕರ್ನಾಟಕ ಮುಂತಾದ ಮುಂಚೂಣಿ ನಿಯತಕಾಲಿಕಗಳಲ್ಲಿ ಇವರ ಕೃತಿಗಳು ಧಾರಾವಾಹಿಯಾಗಿ ಪ್ರಕಟಗೊಂಡು ಅಪಾರ ಜನಪ್ರಿಯತೆ ಗಳಿಸಿದ್ದವು.

ಇವರ ಸಾಹಿತ್ಯ ಕೇವಲ ಪುಸ್ತಕಗಳಿಗೆ ಸೀಮಿತವಾಗದೆ ದೃಶ್ಯಮಾಧ್ಯಮದಲ್ಲೂ ಯಶಸ್ಸು ಕಂಡಿತು. ‘ಸುಖದ ಸೋಪಾನ’, ‘ಕ್ಷಮಯಾಧರಿತ್ರಿ’ ಮುಂತಾದ ಕಾದಂಬರಿಗಳು ದೂರದರ್ಶನದಲ್ಲಿ ಧಾರಾವಾಹಿಯಾಗಿ ಪ್ರಸಾರವಾದರೆ, ಇವರ ಕೃತಿಗಳಾಧಾರಿತ ‘ದೋಣಿ ಸಾಗಲಿ’ (ನಿರ್ದೇಶನ: ರಾಜೇಂದ್ರಸಿಂಗ್ ಬಾಬು) ಹಾಗೂ ‘ಮಿಸ್ ಕ್ಯಾಲಿಫೋರ್ನಿಯಾ’ (ನಿರ್ದೇಶನ: ಕೋಡ್ಲು ರಾಮಕೃಷ್ಣ) ಕಾದಂಬರಿಗಳು ಚಲನಚಿತ್ರಗಳಾಗಿ ಬೆಳ್ಳಿಪರಡೆಯ ಮೇಲೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದವು.

ಸಾಹಿತ್ಯ ಕ್ಷೇತ್ರದ ಅಪಾರ ಸಾಧನೆಗಾಗಿ ಮುಕ್ತಾ ಅವರಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ತ್ರಿವೇಣಿ, ಆರ್ಯಭಟ ಪ್ರಶಸ್ತಿ ಹಾಗೂ ಶಿಕ್ಷಕಿಯರಿಗೆ ನೀಡುವ ಬನಶಂಕರಮ್ಮ ಪ್ರಶಸ್ತಿಗಳು ಒಲಿದುಬಂದಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...