ರಾಜ್ಯ ಬಜೆಟ್ | NABARD ಸಹಯೋಗದೊಂದಿಗೆ ಮೈಸೂರಿನಲ್ಲಿ ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ

Date:

  • ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.
  • ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
  • ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು.
  • ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜಿಸಲಾಗುವುದು.
  • ರಾಜ್ಯದಲ್ಲಿ ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ...