ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

Date:

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆ ಕುರಿತು 3 ದಿನಗಳ ಅವಧಿಗೆ ಕರೆಯಲಾಗಿರುವ ವಿಧಾನ ಮಂಡಲದ ವಿಶೇಷ ಅಧಿವೇಶನವು ಇಂದಿನಿಂದ ಆರಂಭಗೊಂಡಿದೆ.

- Advertisement -

ವಿಧಾನ ಸಭೆಯಲ್ಲಿ ​ರಾಜ್ಯದ ರೈತರನ್ನು ಕಾಡುತ್ತಿರುವ ಭೀಕರ ಬರಗಾಲ ಮತ್ತು ಪಶ್ಚಿಮ ಘಟ್ಟದ ಜನರ ನಿದ್ದೆಗೆಡಿಸಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಉಭಯ ಸದನದ ಸದಸ್ಯರು ಅಣಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

​ಈ ಮಹತ್ವದ ಘಟ್ಟದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿಯ ಕುರಿತಾದ ಚರ್ಚೆಯನ್ನು ಸದನದಲ್ಲಿ ಅಧಿಕೃತವಾಗಿ ಆರಂಭಿಸಿದರು. ಕೇಂದ್ರದ ಕರಡು ಅಧಿಸೂಚನೆಯಿಂದ ರಾಜ್ಯದ ಮಲೆನಾಡು ಭಾಗದ ಜನರಿಗೆ, ಕೃಷಿಕರಿಗೆ ಆಗುವ ತೊಂದರೆಗಳು ಹಾಗೂ ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಸ್ಪಷ್ಟ ನಿಲುವಿನ ಬಗ್ಗೆ ಅವರು ಸದನಕ್ಕೆ ಪೂರಕ ಮಾಹಿತಿಗಳನ್ನು ಮಂಡಿಸಿದರು.

​ಮುಖ್ಯಮಂತ್ರಿಗಳ ಮಾತಿಗೆ ದನಿಗೂಡಿಸಿದ ಅರಣ್ಯ ಸಚಿವ ರಾಮಲಿಂಗೇಗೌಡ ಅವರು ವರದಿಯ ಸೂಕ್ಷ್ಮ ಹಾಗೂ ತಾಂತ್ರಿಕ ಅಂಶಗಳನ್ನು ಸದನದ ಮುಂದಿಟ್ಟರು. ಪಶ್ಚಿಮ ಘಟ್ಟದ ಪರಿಸರ ಸಂರಕ್ಷಣೆಯ ಜೊತೆಗೆ ಅರಣ್ಯದಂಚಿನಲ್ಲಿ ತಲತಲಾಂತರದಿಂದ ಬದುಕುತ್ತಿರುವ ರೈತರು ಹಾಗೂ ಸ್ಥಳೀಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ಅಂಕಿ-ಅಂಶಗಳ ಸಮೇತ ವಿವರಿಸಿದರು.

​ಕಸ್ತೂರಿ ರಂಗನ್ ವರದಿ ಜಾರಿಯಿಂದಾಗುವ ಸಂಭಾವ್ಯ ಪರಿಣಾಮಗಳ ಬಗ್ಗೆ ವಿಧಾನಸಭೆಯಲ್ಲಿ ಸವಿವರವಾಗಿ ಪ್ರಸ್ತಾಪಿಸಲಾಯಿತು. ಮಲೆನಾಡು ಭಾಗದ ರೈತರ ಕೃಷಿ ಚಟುವಟಿಕೆಗಳು ಹಾಗೂ ಅವರ ದೈನಂದಿನ ಬದುಕಿನ ಮೇಲೆ ಉಂಟಾಗುವ ಗಂಭೀರ ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವ ಕುರಿತು ಕಲಾಪದಲ್ಲಿ ಅಭಿಪ್ರಾಯಗಳು ವ್ಯಕ್ತವಾದವು.

​ಮತ್ತೊಂದೆಡೆ, ವಿಧಾನ ಪರಿಷತ್‌ ಕಲಾಪದ ಆರಂಭದಲ್ಲಿ ವಂದೇ ಮಾತರಂ ಗೀತೆ ಗಾಯನ ಮತ್ತು ಸಂವಿಧಾನದ ಪೀಠಿಕೆ ಬೋಧನೆ ವಿಚಾರವಾಗಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಗದ್ದಲ ನಡೆಯಿತು.

​ಈ ಮಧ್ಯೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವ‌ರ್ ಅವರು ಕಸ್ತೂರಿ ರಂಗನ ವರದಿ ವಿಚಾರದ ಚರ್ಚೆಯನ್ನು ಆರಂಭಿಸಿದರು. ಆದರೆ ವಿಪಕ್ಷ ಸದಸ್ಯರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವ‌ರ್ ಮಾತು ಮುಗಿಸುತ್ತಿದ್ದಂತೆ ಸಭಾಪತಿ ಸಲೀಂ ಅಹ್ಮದ್ ಅವರು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...