ಅಧಿವೇಶನ | ಅನ್ನಭಾಗ್ಯ ಅಕ್ಕಿ ಅಕ್ರಮ, 570 ಜನರ ಬಂಧನ: ಸಚಿವ ಕೆೆ ಎಚ್ ಮುನಿಯಪ್ಪ

Date:

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.

- Advertisement -

ಬೆಳಗಾವಿಯ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಭಾಗವಾಗಿ ವಿಧಾನ ಪರಿಷ‌‌ತ್‌ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ” ಎಂದು ಹೇಳಿದರು.

“ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ” ಎಂದು ತಿಳಿಸಿದರು.

“ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ಪರಿಷತ್‌ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ” ಎಂದರು.

“ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್‌ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...