ರಾಜ್ಯದಲ್ಲಿ ತೀವ್ರ ಜಲಕ್ಷಾಮ, 101 ತಾಲ್ಲೂಕುಗಳು ಬರಪೀಡಿತ: ಡಿಸಿಎಂ ಡಾ. ಜಿ ಪರಮೇಶ್ವರ್

Date:

ಮಳೆ ಕೊರತೆಯಿಂದ ತತ್ತರಿಸಿರುವ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆಗಾಗಿ ₹350 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

- Advertisement -

​ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿರುವುದರ ಕುರಿತು ಆತಂಕ ವ್ಯಕ್ತಪಡಿಸಿದರು. ಕಳೆದ ವರ್ಷ ಇದೇ ಅವಧಿಯಲ್ಲಿ ರಾಜ್ಯದ ಜಲಾಶಯಗಳಲ್ಲಿ ಒಟ್ಟು 815 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಆದರೆ, ಈ ಬಾರಿ ಮಳೆ ಕೈಕೊಟ್ಟಿರುವ ಪರಿಣಾಮ ನೀರಿನ ಪ್ರಮಾಣ 684 ಟಿಎಂಸಿ ಅಡಿಗೆ ಇಳಿಕೆಯಾಗಿದೆ. ಇದರ ನೇರ ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ರಾಜ್ಯದ 2,069 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಹಾಹಾಕಾರ ಎದುರಾಗುವ ಆತಂಕವಿದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

​ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಸಮರೋಪಾದಿಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಡಿಸಿಎಂ ವಿವರಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ 758 ಗ್ರಾಮಗಳಿಗೆ 149 ಟ್ಯಾಂಕರ್‌ಗಳ ಮೂಲಕ ಹಾಗೂ ಬಾಡಿಗೆಗೆ ಪಡೆಯಲಾದ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

​ರಾಜ್ಯಾದ್ಯಂತ ವಾಡಿಕೆ ಮಳೆಯಾಗದ ಕಾರಣ ಕೃಷಿ ವಲಯಕ್ಕೆ ಭಾರಿ ಹೊಡೆತ ಬಿದ್ದಿದೆ. ಭೌಗೋಳಿಕ ವಲಯವಾರು ಮಳೆ ಕೊರತೆಯ ಅಂಕಿ-ಅಂಶಗಳನ್ನು ಬಿಚ್ಚಿಟ್ಟ ಅವರು, ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಅಂದರೆ ಶೇ. 41ರಷ್ಟು ಮಳೆ ಕೊರತೆ ದಾಖಲಾಗಿದೆ. ಅದೇ ರೀತಿ ಮಲೆನಾಡಿನಲ್ಲಿ ಶೇ. 35, ಉತ್ತರ ಒಳನಾಡಿನಲ್ಲಿ ಶೇ. 31 ಹಾಗೂ ಕರಾವಳಿ ಭಾಗದಲ್ಲಿ ಶೇ. 24ರಷ್ಟು ಮಳೆ ಕೊರತೆಯಾಗಿದೆ. ಇದು ರೈತಾಪಿ ವರ್ಗವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

​ಬರಪೀಡಿತ ಎಂದು ಘೋಷಿಸಲಾಗಿರುವ 101 ತಾಲ್ಲೂಕುಗಳ ಪೈಕಿ 89 ತಾಲ್ಲೂಕುಗಳು ‘ತೀವ್ರ ಬರ’ಕ್ಕೆ ತುತ್ತಾಗಿದ್ದರೆ, ಉಳಿದ 12 ತಾಲ್ಲೂಕುಗಳಲ್ಲಿ ‘ಸಾಧಾರಣ ಬರ’ ಪರಿಸ್ಥಿತಿ ಇದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು. ಮುಂಬರುವ ಬೇಸಿಗೆಯ ದಿನಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರವು ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...