ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳಾ ಆಯೋಗಕ್ಕೆ ದೂರು

Date:

ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ತಮಗೆ ಸ್ವಾಮೀಜಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಸ್ವಾಮೀಜಿ ಕೂಡ ಮಹಿಳೆ ವಿರುದ್ಧ ಬ್ಲಾಕ್‌ಮೇಲ್‌ ಆರೋಪದ ಮೇಲೆ ಪ್ರತಿದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಮಹಿಳಾ ಆಯೋಗಕ್ಕೆ ಮಹಿಳೆ ನೀಡಿರುವ ದೂರಿನಲ್ಲಿ; “ನನ್ನ ವೈಯಕ್ತಿಕ ಜೀವನದ ಕೆಲವು ಖಾಸಗಿ ವಿಡಿಯೋಗಳು ಸ್ವಾಮೀಜಿ ಬಳಿಯಿವೆ. ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಸ್ವಾಮೀಜಿ ಬೆದರಿಕೆ ಹಾಕುತ್ತಿದ್ದಾರೆ. ತಮ್ಮ ಲೈಂಗಿಕ ಇಚ್ಛೆಗೆ ಸಹಕರಿಸುವಂತೆ ಬ್ಲಾಕ್‌ಮೇಲ್ ಮತ್ತು ಒತ್ತಡ ಹಾಕುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ದೈಹಿಕ ಮತ್ತು ಲೈಂಗಿಕ ಕಿರುಕುಳದ ಜೊತೆಗೆ ತಮಗೆ ತೀವ್ರವಾದ ಮಾನಸಿಕ ಹಿಂಸೆ ನೀಡಲಾಗುತ್ತಿದೆ” ಎಂದು ದೂರಿದ್ದಾರೆ.

ಮಹಿಳೆಯ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗವು, ಪ್ರಕರಣದ ತನಿಖೆ ಮತ್ತು ಸಂತ್ರಸ್ತೆಯ ರಕ್ಷಣೆಗಾಗಿ ಪೊಲೀಸರಿಗೆ ಪತ್ರ ಬರೆದಿದೆ.

ಬೆಂಗಳೂರು ದಕ್ಷಿಣ ವಿಭಾಗದ ಉಪ ಪೊಲೀಸ್‌ ಆಯುಕ್ತರು (DCP) ಮತ್ತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ಆಯೋಗವು ಪತ್ರ ಬರೆದಿದ್ದು, “ಪ್ರಕರಣವನ್ನು ಕೂಡಲೇ ಪರಿಶೀಲಿಸಿ, ಸಂತ್ರಸ್ತೆಗೆ ಅಗತ್ಯವಿರುವ ಕಾನೂನುಬದ್ಧ ನ್ಯಾಯ ಹಾಗೂ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು. ಅದಕ್ಕಾಗಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು” ಎಂದು ಸೂಚಿಸಿದೆ.

ದೂರಿನಲ್ಲಿ ಉಲ್ಲೇಖಿಸಲಾದ ಅಂಶಗಳ ಆಧಾರದ ಮೇಲೆ ಸ್ವಾಮೀಜಿಯವರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಆಯೋಗವು ಒತ್ತಾಯಿಸಿದೆ.

ಇನ್ನು, ಮಹಿಳೆ ದೂರು ನೀಡಿದ ಬೆನ್ನಲ್ಲೇ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಪರವಾಗಿಯೂ ಅವರ ಬೆಂಬಲಿಗರು ಬಾಗಲಕೋಟೆ ಜಿಲ್ಲೆಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. “ಮಹಿಳೆಯು ಸ್ವಾಮೀಜಿಯವರಿಂದ ಕೋಟ್ಯಂತರ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಹಣ ನೀಡದಿದ್ದರೆ ಸುಳ್ಳು ಲೈಂಗಿಕ ಕಿರುಕುಳದ ದೂರು ದಾಖಲಿಸಿ, ಸ್ವಾಮೀಜಿಯವರ ತೇಜೋವಧೆ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದರು. ಸ್ವಾಮೀಜಿಯವರ ವರ್ಚಸ್ಸಿಗೆ ಧಕ್ಕೆ ತರಲು ಮತ್ತು ಅವರನ್ನು ವಿವಾದಕ್ಕೆ ಸಿಲುಕಿಸಲು ಮಹಿಳೆಯು ಯೋಜಿತವಾಗಿ ‘ಹನಿ ಟ್ರ್ಯಾಪ್’ ತಂತ್ರ ಹೂಡಿದ್ದಾರೆ” ಎಂದು ಸ್ವಾಮೀಜಿ ಬೆಂಬಲಿಗರು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸ್ನೂಪ್‌ಗೇಟ್ ರಹಸ್ಯ: ಸುಪ್ರೀಂ ಕೋರ್ಟ್‌ನಲ್ಲಿ ಬಲವಂತವಾಗಿ ಹೂತುಹೋಯ್ತಾ ಮೋದಿಯ ‘ಆ’ ಸಿಡಿ ಪ್ರಕರಣದ ಸತ್ಯ?

“ದೂರುದಾರ ಮಹಿಳೆಯು ಸ್ವಾಮೀಜಿಯವರನ್ನು ಖಾಸಗಿಯಾಗಿ ಮಾತನಾಡಿಸಲು ಪ್ರಯತ್ನಿಸಿ, ಅದನ್ನು ದುರುದ್ದೇಶಪೂರ್ವಕವಾಗಿ ಬಳಸಿಕೊಳ್ಳಲು ಸಂಚು ರೂಪಿಸಿದ್ದರು. ಮಹಿಳೆಯು ಹೇಳುತ್ತಿರುವ ಖಾಸಗಿ ವಿಡಿಯೋಗಳು ತಾಂತ್ರಿಕವಾಗಿ ತಿರುಚಲ್ಪಟ್ಟಿವೆ ಅಥವಾ ಕೃತಕವಾಗಿ ಸೃಷ್ಟಿಸಲಾಗಿದೆ. ಸ್ವಾಮೀಜಿಯವರ ಘನತೆಗೆ ಕುಂದು ತರಲು ಇಂತಹ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ” ಎಂದು ಪ್ರತಿದೂರಿನಲ್ಲಿ ಪ್ರತ್ಯಾರೋಪ ಮಾಡಲಾಗಿದೆ.

“ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸ್ವಾಮೀಜಿಯವರನ್ನು ಹತ್ತಿಕ್ಕಲು ಕೆಲವು ರಾಜಕೀಯ ಶಕ್ತಿಗಳು ಈ ಮಹಿಳೆಯನ್ನು ದಾಳವಾಗಿ ಬಳಸಿಕೊಳ್ಳುತ್ತಿವೆ. ಮೀಸಲಾತಿ ಹೋರಾಟವನ್ನು ಹಾದಿ ತಪ್ಪಿಸಲು ಇಂತಹ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ” ಎಂದು ಬೆಂಬಲಿಗರು ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗದಿಂದ ಪ್ರತಿಕ್ರಿಯೆ ಪಡೆಯಲು ಈದಿನ.ಕಾಮ್ ಪ್ರಯತ್ನಿಸುತ್ತಿದೆ. ಆದರೆ, ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅವರನ್ನು ಸಂಪರ್ಕಿಸಿದೆ. ಆದರೆ, ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಪ್ರತಿಕ್ರಿಯೆ ದೊರೆತ ಬಳಿಕ, ಸುದ್ದಿಯನ್ನು ಅಪ್‌ಡೇಟ್‌ ಮಾಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...