ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

Date:

ಯುವಕನೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

- Advertisement -

ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಎನ್ ಶಿವಕುಮಾರ್ ಮಂಗಳವಾರ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿಚಾರಣೆಯಲ್ಲಿ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್, ಮಂಡಿಸಿದ್ದ “ಮೇಲ್ನೋಟಕ್ಕೆ ಆರೋಪಿ ವಿರುದ್ಧ ಬಲವಾದ ಸಾಕ್ಷ್ಯಗಳಿವೆ. ಜನಪ್ರತಿನಿಧಿಯೊಬ್ಬರ ಇಂತಹ ಕುಕೃತ್ಯ ಅಕ್ಷಮ್ಯ. ಒಂದು ವೇಳೆ ಆರೋಪಿಗೆ ಜಾಮೀನು ನೀಡಿದರೆ ಪ್ರಾಸಿಕ್ಯೂಷನ್ ಸಾಕ್ಷ್ಯ ನಾಶ ಮಾಡಬಹುದು. ರಾಜಕೀಯವಾಗಿ ಬಲಾಢ್ಯ ಹಿನ್ನಲೆಯ ಕುಟುಂಬದ ವ್ಯಕ್ತಿಯಾಗಿರುವ ಕಾರಣ ಇಂತಹವರಿಗೆ ಜಾಮೀನು ನೀಡಿದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆ ಮಾಡಿದಂತಾಗುತ್ತದೆ” ಎಂಬ ವಾದ ಸರಣಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆ ಮತ್ತು ಡೆಂಘೀ- ಜನ ಎಷ್ಟು ಅಂತ ಸಹಿಸಿಕೊಳ್ಳುತ್ತಾರೆ?

ಸೂರಜ್ ಪರ ಹೈಕೋರ್ಟ್‌ನ ಹಿರಿಯ ವಕೀಲ ಎಂ ಅರುಣ್ ಶ್ಯಾಮ್, “ಇದು ಸೂರಜ್ ವಿರುದ್ಧದ ಷಡ್ಯಂತ್ರ. ರಾಜ್ಯ ಸರ್ಕಾರ ಸೂರಜ್ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡಿದೆ. ಈ ಪ್ರಕರಣದಲ್ಲಿ ಪ್ರತಿ ದೂರು ದಾಖಲಾಗಿದೆ. ತಮ್ಮ ಮೇಲಿನ ಸುಲಿಗೆ ಆರೋಪದಿಂದ ತಪ್ಪಿಸಿಕೊಳ್ಳಲು ಈ ದೂರುದಾರ ಈ ಫಿರ್ಯಾದು ನೀಡಿದ್ದಾರೆ. ದೂರುದಾರ ಹಣಕ್ಕಾಗಿ ಬೇಡಿಕೆ ಇರಿಸಿರುವುದು ವೈರಲ್ ಆದ ಆಡಿಯೊದಲ್ಲಿದೆ. ಅರ್ಜಿದಾರ ಬಲವಂತದಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬುದೆಲ್ಲಾ ಸುಳ್ಳು. ಸಂತ್ರಸ್ತ 27 ವರ್ಷದ ವ್ಯಕ್ತಿಯಾಗಿದ್ದು ಇಲ್ಲಿ ಬಲವಂತದ ಪ್ರಶ್ನೆಯೇ ಬರುವುದಿಲ್ಲ. ಸೂರಜ್ ತಲೆ ಮರೆಸಿಕೊಂಡಿರಲಿಲ್ಲ. ಸ್ವತಃ ತಾವೇ ಠಾಣೆಗೆ ಹೋದಾಗ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಪ್ರಕರಣದ ಸಂಪೂರ್ಣ ತನಿಖೆ ಮುಗಿದಿದೆ. ಆದ್ದರಿಂದ ಜಾಮೀನು ನೀಡಬೇಕು” ಎಂದು ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಜಾಮೀನು ತಿರಸ್ಕರಿಸಿ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆ 

ಹಾಸನ ಜಿಲ್ಲೆ ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆಯಾಗಿರುವ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...